Saturday, November 7, 2026
spot_img
More
    spot_img
    HomeLatest newsಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಎಂದ ಯತೀಂದ್ರ ಚೈಲ್ಡ್‌; ಕಾಂಗ್ರೆಸ್‌ ಶಾಸಕನ ಹೇಳಿಕೆ

    ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಎಂದ ಯತೀಂದ್ರ ಚೈಲ್ಡ್‌; ಕಾಂಗ್ರೆಸ್‌ ಶಾಸಕನ ಹೇಳಿಕೆ

    ಬೆಂಗಳೂರು : ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರದ್ದು ಚೈಲ್ಡಿಶ್ ಹೇಳಿಕೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದ್ದಾರೆ.

    ಶಿವಮೊಗ್ಗ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿರುವ ಬಸವರಾಜು ವಿ.ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಹಲವು ಬಾರಿ, ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಮುಂದಿನ ಸಿಎಂ ಎನ್ನುವ ಹೇಳಿಕೆಯನ್ನು ನೀಡಿದ್ದವರು. ಇದಕ್ಕಾಗಿ, ಅವರಿಗೆ ಕೆಪಿಸಿಸಿಯ ಶಿಸ್ತು ಸಮಿತಿ ನೋಟಿಸ್ ಕೂಡಾ ಜಾರಿ ಮಾಡಿತ್ತು. ಈಗ, ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಆ ಮೂಲಕ ಕಾಂಗ್ರೆಸ್‌ನಲ್ಲಿ ಅಪಸ್ವರ ಇರುವುದನ್ನು ಒಪ್ಪಿಕೊಂಡಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಯತೀಂದ್ರ, ನಮ್ಮ ಅಪ್ಪಾಜಿಯವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಇಂತಹ ಸಮಯದಲ್ಲಿ, ವೈಚಾರಿಕವಾಗಿ ಮತ್ತು ಜನಪರ ಸಿದ್ದಾಂತವನ್ನು ಇಟ್ಟುಕೊಂಡವರು ಬೇಕು. ಅದರ ಮುಂದಾಳತ್ವವನ್ನು ವಹಿಸಿಕೊಳ್ಳುವವರು ಅಂದರೆ ಸತೀಶ್ ಜಾರಕಿಹೊಳಿ. ಅವರ ಮಾರ್ಗದರ್ಶನ ಎಲ್ಲರಿಗೂ ಇರಬೇಕು ಎಂದು ಡಾ.ಯತೀಂದ್ರ ಹೇಳಿದ್ದರು. ಆ ಮೂಲಕ, ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎನ್ನುವ ರೀತಿಯಲ್ಲಿ ಬಿಂಬಿಸಿದ್ದರು.

    ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಬಸವರಾಜು ಶಿವಗಂಗಾ, ಇದೊಂದು ತೀರಾ ಬಾಲಿಶತನದ ಹೇಳಿಕೆ, ಯತೀಂದ್ರ ಅವರು ಹಾಲೀ ವಿಧಾನ ಪರಿಷತ್ ಸದಸ್ಯರು. ಹಿಂದೆ, ಶಾಸಕರೂ ಆಗಿದ್ದವರು. ಹಿರಿಯರಾದವರು ಹೇಳಿಕೆ ನೀಡುವಾಗ, ತೂಕಬದ್ದವಾಗಿ ಮಾತನಾಡಬೇಕು, ಇಲ್ಲದಿದ್ದರೆ ಅದು ಬೇರೆ ಅರ್ಥವನ್ನು ಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ರಾಜಮನೆತನದಲ್ಲಾದರೆ ಉತ್ತರಾಧಿಕಾರಿ ಯಾರು ಎನ್ನುವುದು ಮುಂಚೆಯೇ ನಿರ್ಧಾರವಾಗಿರುತ್ತದೆ. ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ನಮ್ಮ ವರಿಷ್ಠರು ಇಂತಹ ಹೇಳಿಕೆಯನ್ನು ಗಮನಿಸುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾನು ಈ ಹಿಂದೆ ಮಾತನಾಡಿದ್ದಕ್ಕೆ ನನಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಬಸವರಾಜು ಹೇಳಿದ್ದಾರೆ. ಯಾವುದೇ ಒಂದು ಕುಟುಂಬದವರು ಯಾರು ಮುಂದಿನ ಮುಖ್ಯಮಂತ್ರಿ ಎಂದು ನಿರ್ಧರಿಸುವುದಲ್ಲ. ಯತೀಂದ್ರ ಅವರು ಇಂತಹ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು. ನಾವೇ, ವಿರೋಧ ಪಕ್ಷಗಳಿಗೆ ಆಹಾರ ನೀಡಿದಂತಾಗುವುದಿಲ್ಲವೇ ಎಂದು ಬಸವರಾಜು ಶಿವಗಂಗಾ ಪ್ರಶ್ನಿಸಿದ್ದಾರೆ. ಹೈಕಮಾಂಡ್ ಈ ಸಂಬಂಧ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ. ಯತೀಂದ್ರ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಹೈಕಮಾಂಡ್ ಎಚ್ಚರಿಕೆಯ ನಂತರವೂ, ಅವರಿಂದ ಇಂತಹ ಹೇಳಿಕೆ ಬರುತ್ತಿದೆ. ಹಿಂದೆ ಕೂಡಾ, ಹಲವು ಬಾರಿ ಪೂರ್ಣಾವಧಿಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳಿದ್ದರು. ಆದರೆ, ಇದುವರೆಗೆ ಒಮ್ಮೆಯೂ ಹೈಕಮಾಂಡ್ ನೋಟಿಸ್ ನೀಡಿಲ್ಲ ಎಂದು ಬಸವರಾಜು ಶಿವಗಂಗಾ ಕಿಡಿಕಾರಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search