ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದ್ದು, ಸಿಎಂ ರೇಸ್ನಲ್ಲಿ ದೇವೇಂದ್ರ ಫಡ್ನವೀಸ್ ಮೊದಲಿಗರಾಗಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ.
ಸಿಂಗಲ್ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆಯಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ರೇಸ್ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಶಿವಸೇನೆಯ ಏಕನಾಥ್ ಶಿಂಧೆ ಅವರು ಕೂಡ ಮತ್ತೆ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಸಿಎಂ ಆಗಬೇಕು ಎಂದೇನಿಲ್ಲ ಎಂದು ಹೇಳಿದ್ದಾರೆ.
ಬಹುತೇಕ ಇಂದೇ ಸಿಎಂ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಇಂದು ಸಂಜೆಯ ವೇಳೆಗೆ ದೇವೇಂದ್ರ ಫಡ್ನವೀಸ್ ಹೆಸರೇ ಅಂತಿಮವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


