ಸೌದಿ ಅರೇಬಿಯಾದಲ್ಲಿ ಇಂದು ( ನವೆಂಬರ್ 24 ) ಮತ್ತು ನಾಳೆ ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, 577 ಆಟಗಾರರ ಪೈಕಿ ಇಂದು 84 ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ.
ಮೆಗಾ ಹರಾಜು ಆರಂಭಕ್ಕೂ ಕೆಲ ವಾರಗಳ ಮುನ್ನವೇ ಭಾರೀ ಚರ್ಚೆ ಹುಟ್ಟುಹಾಕಿದ್ದ ಕೆಎಲ್ ರಾಹುಲ್ ಭಾರೀ ದೊಡ್ಡ ಮೊತ್ತಕ್ಕೆ ಹರಾಜಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ 14 ಕೋಟಿ ರೂಪಾಯಿಗೆ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗುವ ಮೂಲಕ ನಿರಾಸೆಗೊಳಗಾಗಿದ್ದಾರೆ.
ಇತರೆ ಆಟಗಾರರಿಗೆ ಹೋಲಿಸಿದರೆ ಕಡಿಮೆ ಮೊತ್ತಕ್ಕೆ ಹರಾಜಾದ ಹಿನ್ನಡೆಯೊಂದೆಡೆಯಾದರೆ, ಮತ್ತೊಂದೆಡೆ ಈ ಹರಾಜು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಮತ್ತು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಸಲಿದೆ ಎಂಬ ನಿರೀಕ್ಷೆ ಹೊಂದಿದ್ದ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


