Monday, November 2, 2026
spot_img
More
    spot_img
    HomeStateನಿಖಿಲ್‌ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಸಮಾಧಾನ ಹೇಳಿದ ಅಭಿಮಾನಿ

    ನಿಖಿಲ್‌ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಸಮಾಧಾನ ಹೇಳಿದ ಅಭಿಮಾನಿ

    ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ.

    ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಭಾರೀ ಮತಗಳ ಅಂತರದಿಂದ ಸೋಲನ್ನನುಭವಿಸಿದರು.

    ಈ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸಮಾಧಾನ ಮಾಡುವ ಸಲುವಾಗಿ ಕಡೂರು ಮೂಲದ ಹರ್ಷಿತ್‌ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ನೀವು ಸೋತಿರಬಹುದು ಆದರೆ ಜನರ ಮನಸ್ಸಿನಲ್ಲಿದ್ದೀರಿ. ನಿಷ್ಠಾವಂತ ಕಾರ್ಯಕರ್ತರಲ್ಲಿ ಜೆಡಿಎಸ್‌ ಉಸಿರಿದೆ. ಮುಂದಿನ ದಿನಗಳಲ್ಲಿ ಒಳ್ಳೆಯತನ ಗೆದ್ದೇ ಗೆಲ್ಲುತ್ತೆ. ನೀವು ಎದೆಗುಂದಲೇ ಪಕ್ಷದಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುತ್ತೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ಮೂಲಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣದಲ್ಲಿ ಸೋತರೂ ಅಭಿಮಾನಿಗಳ ಮಹಾದಂಡೇ ಇದೆ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಿಖಿಲ್‌ಗೆ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search