ಬೆಂಗಳೂರು: ಇವಿಎಂ ಹ್ಯಾಕ್ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿದ್ದು, ಮಹಾವಿಕಾಸ್ ಆಘಾಡಿ ಮಕ್ಕಾಡೆ ಮಲಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. ಆದರೆ ಎಲ್ಲವೂ ಉಲ್ಟಾ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಹಳಷ್ಟು ಕಡೆ ಇವಿಎಂ ಮ್ಯಾನಿಪುಲೇಟ್ ಮಾಡಿದ್ದಾರೆ ಎನ್ನುವ ಶಂಕೆಯಿದೆ. ಆದರೆ ಜಾರ್ಖಂಡ್ ಚುನಾವಣೆಯಲ್ಲಿ ಯಾಕೆ ಹಾಗಾಗಲಿಲ್ಲ ಅಂದರೆ ಬಿಜೆಪಿಯವರು ಪ್ಲಾನ್ ಆಫ್ ಆಕ್ಷನ್ ರೀತಿ ಇದನ್ನು ಮಾಡುತ್ತಾರೆ. ನಂಬಿಕೆ ಬರಬೇಕೆಂದು ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್ ಮಾಡಲಾಗಿದೆ. ಆದ್ದರಿಂದಲೇ ನಮ್ಮ ಮೈತ್ರಿಕೂಟಕ್ಕೆ ಕಡಿಮೆ ಸ್ಥಾನ ಬಂದಿದೆ ಎಂದು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


