ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದ ಮಗ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತ ನಂತರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಚುನಾವಣೆಯ ಫಲಿತಾಂಶ ಬಂದಿದೆ. ಜನರ ತೀರ್ಪಿಗೆ ನಾವು ತಲೆಬಾಗಲೆಬೇಕು. ಈಗ ಅದರ ಬಗ್ಗೆ ಮಾತನಾಡಿದರೆ ಏನೂ ಪ್ರಯೋಜನವಿಲ್ಲ. ಏನೇ ಆದರೂ ಆಮೇಲೆ ಮಾತನಾಡುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಚನ್ನಪಟ್ಟಣದ ಫಲಿತಾಂಶದಿಂದ ತೀವ್ರ ಬೇಸರಗೊಂಡಿರುವ ಕುಮಾರಸ್ವಾಮಿ ಅವರು, ಯಾವುದೇ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ ಪುತ್ರ ನಿಖಿಲ್ ಜೊತೆ ಜೆ.ಪಿ.ನಗರದ ತಮ್ಮ ನಿವಾಸದಲ್ಲಿಯೇ ಇದ್ದರು.
ಆದರೆ ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನಕ್ಕೆ ಭಾಗಿಯಾಗಲೇಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12.30ರ ಸಮಯದಲ್ಲಿ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಆದರೂ ಚನ್ನಪಟ್ಟಣದಲ್ಲಿ ಮಗನ ಸೋಲಿನಿಂದ ಹತಾಶರಾಗಿರುವ ಕುಮಾರಸ್ವಾಮಿ ಅವರು, ಮಗನ ಭವಿಷ್ಯದ ಬಗ್ಗೆ ತೀವ್ರ ಚಿಂತೆಯಲ್ಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


