ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬದಲಾವಣೆಯ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಹೌದು, ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಈ ಚರ್ಚೆಗಳು ಜೋರಾಗಿರುವಾಗಲೇ ಆಂತರಿಕವಾಗಿ ಎರಡು ಬಣಗಳು ಮತ್ತೆ ಸಕ್ರಿಯವಾಗಿದ್ದು, ಕೆಲ ಶಾಸಕರು ದೆಹಲಿ ಪ್ರವಾಸವನ್ನೂ ಸಹ ಕೈಗೊಂಡಿದ್ದಾರೆ. ಈ ಎಲ್ಲ ಮಹತ್ವದ ಬೆಳವಣಿಗೆಗಳ ನಡುವೆಯೇ ನಿನ್ನೆ ( ನವೆಂಬರ್ 23 ) ಗೃಹ ಸಚಿವ ಜಿ. ಪರಮೇಶ್ವರ್ ತಾವು ಯಾವಾಗಲೂ ಸಿಎಂ ರೇಸ್ನಲ್ಲಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ತಮಗೂ ಸಹ ಸಿಎಂ ಆಗುವ ಆಸೆ ಇದೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದರು.
ಪರಮೇಶ್ವರ್ ಅವರ ಈ ಹೇಳಿಕೆ ಭಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದು, ಪರಮೇಶ್ವರ್ ಸಿದ್ದರಾಮಯ್ಯ ವಿರುದ್ಧ ನಿಂತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಹೀಗೆ ತಮ್ಮ ಹೇಳಿಕೆಯಿಂದ ಕುತೂಹಲ ಮೂಡಿಸಿದ ಪರಮೇಶ್ವರ್ ಇಂದು ( ನವೆಂಬರ್ 24 ) ಬೆಳ್ಳಂಬೆಳಗ್ಗೆಯೇ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡುವ ಮೂಲಕ ಸಿಎಂ ರೇಸ್ ಹೇಳಿಕೆಗೆ ಸ್ಪಷ್ಟನೆ ನೀಡಿದಂತಿದೆ.
ಈ ಮೂಲಕ ತಾವು ಪರೋಕ್ಷವಾಗಿ ಸಿದ್ದರಾಮಯ್ಯ ಪರ ಇದ್ದೇನೆ ಎಂದು ಪರಮೇಶ್ವರ್ ತಿಳಿಸಿದ್ದು, ಈ ದಿಢೀರ್ ಭೇಟಿಯ ಹಿಂದಿನ ಉದ್ದೇಶವೇನು ಎಂಬುದು ಬಯಲಾಗಬೇಕಿದೆ.
ಚನ್ನಪಟ್ಟಣ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ರೆಡ್ಹ್ಯಾಂಡ್ ಆಗಿ ಪತ್ನಿಗೆ ಸಿಕ್ಕಿಬಿದ್ದ ಪಾಪಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


