Tuesday, November 3, 2026
spot_img
More
    spot_img
    HomeChampions Trophy 20252000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ?; ಸಿಎಂ ಸಿದ್ದರಾಮಯ್ಯ ಪ್ರಶ್ನೆ

    2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ?; ಸಿಎಂ ಸಿದ್ದರಾಮಯ್ಯ ಪ್ರಶ್ನೆ

    ಚಿಕ್ಕಬಳ್ಳಾಪುರ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

    ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದು ವಾಗ್ದಾಳಿ ನಡೆಸಿದರು.

    ಇನ್ನು ಮುಂಧೂವರಿದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

    ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search