ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ 288 ರನ್‌ಗಳ ಮುನ್ನಡೆ ಸಾಧಿಸಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 489 ರನ್‌ಗಳಿಗೆ ಆಲ್‌ಔಟ್ ಆಯಿತು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಗೆ ಮುಗ್ಗರಿಸಿ 201 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ.
ಹೀಗೆ 288 ರನ್‌ಗಳ ಮುನ್ನಡೆ ಸಾಧಿಸಿ ಭಾರತದ ಮೇಲೆ ಫಾಲೋಆನ್ ವಿಧಿಸುವ ಅವಕಾಶವಿದ್ದರೂ ಸಹ ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬುವುಮಾ ಫಾಲೋಆನ್ ವಿಧಿಸದೇ ಮತ್ತೆ ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದೆ.
ಫಾಲೋಆನ್ ವಿಧಿಸಲು ಮೊದಲ ಇನ್ನಿಂಗ್ಸ್‌ನಲ್ಲಿ ತಂಡವೊಂದು ಕನಿಷ್ಟ 200 ರನ್‌ಗಳ ಮುನ್ನಡೆ ಸಾಧಿಸಿರಬೇಕು. ಇಲ್ಲಿ ದಕ್ಷಿಣ ಆಫ್ರಿಕಾ 288 ರನ್‌ಗಳ ಮುನ್ನಡೆ ಸಾಧಿಸಿದ್ದರಿಂದ ಫಾಲೋಆನ್ ವಿಧಿಸುವ ಅರ್ಹತೆ ಹೊಂದಿತ್ತು.
ಚನ್ನಪಟ್ಟಣ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ರೆಡ್‌ಹ್ಯಾಂಡ್ ಆಗಿ ಪತ್ನಿಗೆ ಸಿಕ್ಕಿಬಿದ್ದ ಪಾಪಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


