Sunday, April 5, 2026
spot_img
More
    spot_img
    HomeStateDistrictನವೆಂಬರ್ 28ರಂದು ಸರ್ಕಾರಿ ರಜೆ ಘೋಷಣೆ?

    ನವೆಂಬರ್ 28ರಂದು ಸರ್ಕಾರಿ ರಜೆ ಘೋಷಣೆ?

    ನವೆಂಬರ್ 28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆಯೇ?. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಶಾಸಕರು ಪತ್ರವನ್ನು ಬರೆದು ಮನವಿ ಮಾಡಿದ್ದಾರೆ.

    ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮದ ತಯಾರಿ ನಡೆಯುತ್ತಿದೆ. ಪ್ರಧಾನಿಗಳ ಭದ್ರತೆ ನೋಡಿಕೊಳ್ಳುವ ಎಸ್‌ಪಿಜಿ ಸಹ ನಗರಕ್ಕೆ ಆಗಮಿಸಿ ಪರಿಶೀಲನೆಯನ್ನು ನಡೆಸುತ್ತಿದೆ.

    ನರೇಂದ್ರ ಮೋದಿ ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ  ಭಾಗವಹಿಸಲು ಆಗಮಿಸುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ದೇಶದ ಪ್ರಧಾನಿಯೊಬ್ಬರು ಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ ಎಂದು ಹೇಳಿದ್ದಾರೆ.

    ಉಡುಪಿ ಜಿಲ್ಲಾಡಳಿತ ಸ್ಥಳೀಯ ರಜೆ ನೀಡಿದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ  ಭಾಗಿಯಾಗಲು ಅನುಕೂಲವಾಗಲಿದೆ. ಪ್ರಧಾನಮಂತ್ರಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುತ್ತದೆ.

    ಈ ಹಿನ್ನೆಲೆಯಲ್ಲಿ ನವೆಂಬರ್ 28ರಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲೆಯಲ್ಲಿ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

    ಶಾಸಕರ ಪತ್ರದ ವಿವರ: ಯಶ್‌ಪಾಲ್‌ ಎ. ಸುವರ್ಣ, ಶಾಸಕರು ಉಡುಪಿ ವಿಧಾನಸಭಾ ಕ್ಷೇತ್ರ ಮಾನ್ಯ ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರವು ಗೌರವಾನ್ವಿತ ಪ್ರಧಾನಮಂತ್ರಿರವರ ಉಡುಪಿ ಭೇಟಿಯ ದಿನ ಸ್ಥಳೀಯ ರಜೆ ಘೋಷಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

    ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ 28.11.2025ರ ಶುಕ್ರವಾರದಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರು ಉಡುಪಿಯ ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಪುತ್ತಿಗೆ ಮಠಗಳ ಆಶ್ರಯದಲ್ಲಿ ನಡೆಯುವ “ಲಕ್ಷ ಕಂಠ ಗೀತಾ ಗಾಯನ” ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದು ತಮಗೆ ತಿಳಿದ ವಿಚಾರವಾಗಿದೆ.

    ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪ್ರಧಾನಮಂತ್ರಿಗಳ ಭೇಟಿ ಸಮಯದ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿದೆ.

    ಆದ್ದರಿಂದ 28.11.2025 ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬಿಗ್ ನ್ಯೂಸ್! ಮೈಕ್ರೋಸಾಫ್ಟ್ ಹೊಸ AI ಸಿಡಿಲು… Google Geminiಗೂ ಮೀರಿದ ಪರ್ಫಾರ್ಮೆನ್ಸ್, ಬೆಲೆ ಕೇಳಿದ್ರೆ ಶಾಕ್!

    Microsoft AI transcription model ಇದೀಗ ಟೆಕ್ ಜಗತ್ತಿನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ! Google‌ನ Gemini 3.1 Flash ಮಾದರಿಗೂ ಮೀರಿದ ಹೊಸ ಟ್ರಾನ್ಸ್‌ಕ್ರಿಪ್ಷನ್ ಟೆಕ್ನಾಲಜಿ ಅನ್ನು ಮೈಕ್ರೋಸಾಫ್ಟ್ ಬಿಡುಗಡೆ ಮಾಡಿದೆ. ಅದೇ...

    ಬ್ರೇಕಿಂಗ್! ಮಕ್ಕಳಿಗೆ ಉದ್ಯೋಗ ಇಲ್ಲಂದ್ರೆ ಪೋಷಕರಿಗೆ ಡಿಪ್ರೆಷನ್ ಶಾಕ್… ಹೊಸ ಸ್ಟಡಿ ಸದ್ದು!

    Unemployment mental health India study ಇದೀಗ ದೇಶದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ! ಮಕ್ಕಳಿಗೆ ಕೆಲಸ ಇಲ್ಲ ಅಂದ್ರೆ ಅದರ ಪರಿಣಾಮ ಪೋಷಕರ ಮನಸ್ಸಿನ ಮೇಲೂ ಎಷ್ಟು ಗಂಭೀರವಾಗಿ ಬೀಳುತ್ತೆ ಅನ್ನೋದನ್ನು ಹೊಸ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading