ಚಾಮರಾಜನಗರ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಬೇಗ ಗುಣಮುಖರಾಗಲಿ ಎಂದು ಶಿವಣ್ಣ ಅಭಿಮಾನಿಗಳು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿರುವ ಶಿವು ಹಾಗೂ ಸ್ನೇಹಿತರು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಅಪಪ್ಟ ಅಭಿಮಾನಿಯಾಗಿರುವ ಶಿವು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತ್ತರ ಬಿಲ್ವಾರ್ಚನೆ ಪೂಜೆ ಮಾಡಿಸಿದ್ದಾರೆ.
ಶಿವುಗೆ ಸ್ನೇಹಿತರಾದ ದರ್ಶನ್, ಅಭಿರಾಜ್, ಮನೋಹರ್, ಟಿ.ನಾರಾಯಣ್ ಶಿವಮಲ್ಲು ಸೇರಿದಂತೆ ಹಲವು ಅಭಿಮಾನಿಗಳು ಸಾಥ್ ನೀಡಿದ್ದಾರೆ.
ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದ ಸುತ್ತಲೂ ಮೂರು ಬಾರಿ ಉರುಳು ಸೇವೆ ಮಾಡಿ ಕೇಶಮುಂಡನ ಮಾಡಿಸುವ ಮೂಲಕ ಹರಕೆ ಸಲ್ಲಿಸಿದ್ದಾರೆ.
ಇನ್ನು ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಅಮೆರಿಕಾಗೆ ತೆರಳಿರುವ ಶಿವರಾಜ್ ಕುಮಾರ್ ಅವರು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಒಂದು ತಿಂಗಳು ಅಲ್ಲೇ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


