ನವದೆಹಲಿ: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ವಿವಿಧ ರಾಜ್ಯಗಳ 17 ಮಕ್ಕಳು ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 17 ಮಂದಿ ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಇದೇ ಡಿಸೆಂಬರ್.26ರಂದು ಪ್ರದಾನ ಮಾಡಲಿದ್ದಾರೆ.
ದೆಹಲಿಯ ಭಾರತ ಮಂಟಪ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರಾಡಳಿತ ಪ್ರದೇಶಗಳು ಹಾಗೂ 14 ರಾಜ್ಯಗಳ ಒಟ್ಟು 17 ಮಕ್ಕಳನ್ನು ಈ ಬಾರಿಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಆಯ್ಕೆಯಾದವರಲ್ಲಿ 10 ಮಂದಿ ಬಾಲಕಿಯರು ಹಾಗೂ ಏಳು ಮಂದಿ ಬಾಲಕರು ಇದ್ದಾರೆ.
ಕಲೆ, ಸಂಸ್ಕೃತಿ, ಶೌರ್ಯ, ನಾವಿನ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಸಮಾಜ ಸೇವೆ, ಕ್ರೀಡೆ ಹಾಗೂ ಪರಿಸರ ಎಂಬ ಏಳು ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ.
ಇನ್ನು ಈ ಕಾರ್ಯಕ್ರಮಕ್ಕೂ ಮೊದಲು ಪ್ರಶಸ್ತಿ ಪುರಸ್ಕೃತ ಮಕ್ಕಳು ಸೇರಿದಂತೆ ಸುಮಾರು 3500ಕ್ಕೂ ಹೆಚ್ಚಿನ ಮಕ್ಕಳು ಮೆರವಣಿಗೆ ನಡೆಸಲಿದ್ದು, ಅಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


