Tuesday, September 22, 2026
spot_img
More
    spot_img
    HomeLatest newsಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಪದೇಪದೇ ಅನಾರೋಗ್ಯ ಉಂಟಾಗಲು ಕಾರಣ ಬಹಿರಂಗ

    ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಪದೇಪದೇ ಅನಾರೋಗ್ಯ ಉಂಟಾಗಲು ಕಾರಣ ಬಹಿರಂಗ

    ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಗೆ ಪದೇ ಪದೇ ಆರೋಗ್ಯ ಹದಗೆಡಲು ಅವರ ಮಿದುಳಿನಲ್ಲಿ ರಕ್ತ ಹೆಪ್ಪಗಟ್ಟುತ್ತಿರುವುದೇ ಕಾರಣ ಎಂದು ತಿಳಿದುಬಂದಿದೆ.

    ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಬ್ಳಿಗೆ ಹಲವು ಬಾರಿ ಚಿಕಿತ್ಸೆ ಪಡೆದರೂ ಅವರು ಮತ್ತೆ ಮತ್ತೆ ಅನಾರೋಗ್ಯಕ್ಕೀಡಾಗುತ್ತಿದ್ದರು. ಇದಕ್ಕೆ ಕಾರಣ ಅವರ ಕುಡಿತದ ಚಟ ಎಂದು ವರದಿಗಳಾಗಿದ್ದವು. ಇದೀಗ ಅವರಿಗೆ ಪದೇ ಪದೇ ಅವರ ಆರೋಗ್ಯ ಸ್ಥಿತಿ ಹದಗೆಡಲು ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುತ್ತಿರುವುದೇ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

    ಅನಾರೋಗ್ಯದ ಕಾರಣ ವಿನೋದ್ ಕಾಂಬ್ಳಿ ಅವರನ್ನು ಡಿಸೆಂಬರ್ 21 ರಂದು ಥಾಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಮೂತ್ರದ ಸೋಂಕು ಮತ್ತು ಒತ್ತಡದ ಬಗ್ಗೆ ತಿಳಿಸಿದ್ದರು. ಇದರ ಜೊತೆಗೆ ಪದೇ ಪದೇ ನೋವು ಕಾಣಿಸಿಕೊಳ್ಳುತ್ತಿರುವುದಾಗಿ ವೈದ್ಯರಲ್ಲಿ ಹೇಳಿಕೊಂಡಿದ್ದರು.

    ಹೀಗಾಗಿ ಆಕತಿ ಆಸ್ಪತ್ರೆಯ ವೈದ್ಯರಾದ ಡಾ. ವಿವೇಕ್ ತ್ರಿವೇದಿ ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದಾರೆ. ಈ ವರದಿಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇದನ್ನು ಪರಿಶೀಲಿಸಿದಾಗ ವಿನೋದ್ ಕಾಂಬ್ಳಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡು ಬಂದಿದೆ ಎಂದು ಡಾಕ್ಟರ್ ತ್ರಿವೇದಿ ತಿಳಿಸಿದ್ದಾರೆ.

    ಸದ್ಯಕ್ಕೆ ಇದರ ಗಂಭೀರತೆಯ ಬಗ್ಗೆ ವೈದ್ಯರು ಹೆಚ್ಚಿನ ಮಾಹಿತಿ ನೀಡದಿದ್ದರೂ, ಆಸ್ಪತ್ರೆಯಲ್ಲಿ ವಿಶೇಷ ತಂಡ ಅವರ ಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ವೈದ್ಯರು ಹೇಳಿದ್ದಾರೆ. ಅಲ್ಲದೆ, ಡಿಸೆಂಬರ್ 24 ರಂದು ಮತ್ತೊಮೆ ಪರೀಕ್ಷೆಗೆ ಒಳಪಡಿಸಲಿದ್ದೇವೆ ಎಂದು ತಿಳಿಸಿದ್ದಾರೆ.
    ಇನ್ನು ವಿನೋದ್ ಕಾಂಬ್ಳಿ ಅವರಿಗೆ ಸಂಪೂರ್ಣ ಚಿಕಿತ್ಸೆ ಉಚಿತವಾಗಿ ನೀಡಲು ಆಸ್ಪತ್ರೆಯ ಪ್ರಭಾರಿ ನಿರ್ಧರಿಸಿದ್ದಾರೆ ಎಂದು ಇದೇ ವೇಳೆ ವೈದ್ಯರು ತಿಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ವಿನೋದ್ ಕಾಂಬ್ಳಿ ಅವರು ಸಂಪೂರ್ಣವಾಗಿ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading