ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಬಿಜೆಪಿಯ ಎಂಎಲ್‌ಸಿ ಸಿ.ಟಿ.ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ಅನ್ಯಾಯವಾದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಿಐಡಿ ಕೆಲಸ ಮಾಡುವುದಿಲ್ಲ. ಈ ಸಂಸ್ಥೆಯು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತದೆ. ಇದರಿಂದ ನಮಗೆ ನ್ಯಾಯ ಸಿಗಲ್ಲ, ಹಾಲಿ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆಯಾಗಬೇಕು. ಆಗ ಮಾತ್ರ ಎಲ್ಲರಿಗೂ ನ್ಯಾಯ ಸಿಗುತ್ತದೆ. ಹಾಗಾಗಿ ಹಾಲಿ ನ್ಯಾಯಾಧೀಶರ ಸಮ್ಮುಖದಲ್ಲೇ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿ ಅವರು, ಸಿಐಡಿ ಸಂಸ್ಥೆಯು ಒತ್ತಡದಲ್ಲಿ ಕೆಲಸ ಮಾಡುತ್ತದೆ. ಆದ ಕಾರಣ ಇದರಿಂದ ನ್ಯಾಯ ಸಿಗುವುದು ಮರಿಚಿಕೆಯಾಗಿದೆ. ಒತ್ತಡವಿಲ್ಲದೇ ಕೆಲಸ ಮಾಡಿದರೆ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ನಿಂದಲೂ ನ್ಯಾಯ ಸಿಗುತ್ತದೆ. ನ್ಯಾಯ ಸಮ್ಮತವಾಗಿದ್ದರೆ ಸಿಐಡಿಗೆ ವಹಿಸುವ ಆಗತ್ಯವಿರಲಿಲ್ಲ. ಈ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


