Wednesday, September 23, 2026
spot_img
More
    spot_img
    HomeLatest newsಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಜೈಲಿನಿಂದ ರಿಲೀಸ್‌ ಆದ ಡ್ರೋನ್‌ ಪ್ರತಾಪ್‌

    ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಜೈಲಿನಿಂದ ರಿಲೀಸ್‌ ಆದ ಡ್ರೋನ್‌ ಪ್ರತಾಪ್‌

    ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ಡ್ರೋನ್‌ ಪ್ರತಾಪ್‌ ಇಂದು ಜಾಮೀನಿನ ಮೇಲೆ ರಿಲೀಸ್‌ ಆಗಿದ್ದಾರೆ.

    ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡ್ರೋನ್‌ ಪ್ರತಾಪ್‌ ಅವರು, ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ನಾನು ಕೇವಲ 500 ಗ್ರಾಂ ಸೋಡಿಯಂ ಸ್ಫೋಟ ಮಾಡಿದ್ದೇನೆ. ಆದರೆ ದೇಶದಲ್ಲಿ ಹಲವು ಮಂದಿ ಯೂಟ್ಯೂಬರ್‌ಗಳು ೧ ಕೆಜಿಗಿಂತಲೂ ಹೆಚ್ಚಿನ ಸೋಡಿಯಂ ಸ್ಫೋಟ ಮಾಡಿದ್ದಾರೆ. ಯೂಟ್ಯೂಬ್‌ ನೋಡಿದರೆ ಇದೆಲ್ಲಾ ಗೊತ್ತಾಗುತ್ತದೆ. ಅವರ ಮೇಲೆ ಆಗದ ಕ್ರಮ ನನ್ನ ಮೇಲೆ ಮಾತ್ರ ಯಾಕೆ ಎಂದು ಪ್ರಶ್ನಿಸಿದರು.

    ಇನ್ನು ನಾನು ವಿಜ್ಞಾನ ಪ್ರಯೋಗಕ್ಕೆ ಸಂಬಂಧಿಸಿದಂತೆ ಸ್ಫೋಟ ಮಾಡಿದ್ದೇನೆ ಎಂದು ಯೂಟ್ಯೂಬ್‌ನಲ್ಲೇ ತಿಳಿಸಿದ್ದೇನೆ. ಈ ವಿಚಾರ ಹೈಸ್ಕೂಲ್‌ ಮಕ್ಕಳ ಪಠ್ಯದಲ್ಲಿದೆ. ಯೂಟ್ಯೂಬ್‌ ಓಪನ್‌ ಮಾಡಿದರೆ ಹಲವು ಮಂದಿ ಈ ರೀತಿಯ ಪ್ರಯೋಗ ಮಾಡಿದ್ದಾರೆ. ಆದರೆ ನನ್ನನ್ನು ಮಾತ್ರ ಬಂಧಿಸಿದ್ದು ಯಾಕೆ? ನನಗೆ ನ್ಯಾಯ ಬೇಕು ಎಂದು ಆಗ್ರಹಿಸಿದರು.

    ಇನ್ನು ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಡ್ರೋನ್‌ ಪ್ರತಾಪ್‌ಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿತ್ತು.

    ಈ ವೇಳೆ 2 ಲಕ್ಷ ರೂ ಬಾಂಡ್‌ ಹಾಗೂ ಇಬ್ಬರು ಶ್ಯೂರಿಟಿ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿತ್ತು. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇಂದು ಸಂಜೆ ಮಧುಗಿರಿಯ ಉಪ ಕಾರಾಗೃಹದಿಂದ ಡ್ರೋನ್‌ ಪ್ರತಾಪ್‌ ಬಿಡುಗಡೆಯಾಗಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading