ಬೆಂಗಳೂರು: ಸೆಲೆಬ್ರಿಟಿಗಳ ಹೆಸರಿನಲ್ಲಿ ಹಾಗೂ ರಾಜಕಾರಣಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆಗೆದು ಹಣ ಪೀಕುತಿದ್ದ ಸುದ್ದಿಗಳನ್ನು ಇಷ್ಟು ದಿನಗಳ ಕಾಲ ನೋಡಿದ್ದೀರಿ.
ಆದರೆ ಇಲ್ಲೊಂದು ಪ್ರಕರಣದಲ್ಲಿ ಗೋಲ್ಡ್ ಶಾಪ್ ಮಾಲೀಕರು ನಾನು ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಎಂಟು ಕೋಟಿ ರೂಪಾಯಿ ವಂಚನೆ ಮಾಡಿದ್ದಾಳೆ ಎಂದು ಯುವತಿಯೊಬ್ಬಳ ವಿರುದ್ಧ ದೂರನ್ನು ದಾಖಲಿಸಿದ್ದಾರೆ.
ಹೌದು, ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನ ಮಾಲೀಕರಾದ ಚಂದ್ರ ಲೇಔಟ್ ನಿವಾಸಿ ವನಿತಾ ಐತಾಳ್ ಅವರು ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ.
ಐಶ್ವರ್ಯ ಗೌಡ 2023ರ ಅಕ್ಟೋಬರ್ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಚಿನ್ನ ಪಡೆದಿದ್ದು 8.41 ಕೋಟಿ ರೂಪಾಯಿ ವಂಚನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಐಶ್ವರ್ಯಳನ್ನ ಹಣ ಕೇಳಿದಾಗ ಡಿ ಕೆ ಸುರೇಶ್ರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಾಗಿದೆ.
ಹಲವರಿಂದ ಧಮ್ಕಿ
ಅಲ್ಲದೆ ಸಿನಿಮಾ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಐಶ್ವರ್ಯ ಗೌಡ ಅವರ ಪತಿ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ ಕೆ ಸುರೇಶ್ ತಂಗಿ, ನನಗೆ ಅನೇಕ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


