Wednesday, September 23, 2026
spot_img
More
    spot_img
    HomeTop Storyಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಪಬ್, ಬಾರ್ ತೆರೆಯಲು ಮನವಿ

    ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಪಬ್, ಬಾರ್ ತೆರೆಯಲು ಮನವಿ

    ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು, ಪಬ್, ಬಾರು, ರೆಸ್ಟೋರೆಂಟ್‍ಗಳನ್ನು ತಡರಾತ್ರಿ 2 ಗಂಟೆವರೆಗೆ ತೆರೆಯುವಂತೆ ಮಾಲೀಕರು ಮನವಿ ಮಾಡಿದ್ದಾರೆ.

    ವರ್ಷಾಚರಣೆ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಈಗಾಗಲೇ ಭರದ ಸಿದ್ದತೆ ನಡೆಯುತ್ತಿದ್ದು, ಪಬ್ಬು, ಬಾರ್‍ಗಳನ್ನು ಮುಂಗಡ ಬುಕ್ಕಿಂಗ್ ಮಾಡಿಕೊಂಡಿದ್ದು, ಆ.31ರ ರಾತ್ರಿ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ಅಂದಾಜು 1500 ಕೋಟಿಗೂ ಅಧಿಕ ವ್ಯಾಪಾರವಾಗುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

    ಪ್ರಸ್ತುತ 12 ಗಂಟೆವರೆಗೆ ಮಾತ್ರ ಪಬ್ ಬಾರ್‍ ಗಳನ್ನು ತೆರೆಯಲು ಅವಕಾಶ ನೀಡಿದ್ದು, ಹೊಸ ವರ್ಷಾಚರಣೆಯ ಹಿಂದಿನ ದಿನ 31ರ ರಾತ್ರಿ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
    ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಒಂದು ವೇಳೆ ಸಮಯ ನೀಡದಿದ್ದರೆ ವ್ಯಾಪಾರಕ್ಕೆ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಕಾಲಾವಕಾಶವನ್ನು ನೀಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading