ಬೆಂಗಳೂರು ನಗರದಲ್ಲಿ ಕೆಲಸ ಹುಡುಕುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಒಂದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. 15/1/2026 ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ.
ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಆನ್‌ಲೈನ್ ಮೂಲಕ ಅರ್ಜಿಯನ್ನು ಕರೆದಿದೆ. ಒಟ್ಟು 7 ಹುದ್ದೆಗಳಿದ್ದು, ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಬಿಎಂಆರ್‌ಸಿಎಲ್ ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ O & M ವಿಂಗ್‌ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಈ ಹುದ್ದೆಗಳನ್ನು ಗುತ್ತಿಗೆ/ ಪ್ರಭಾರ ಮಾದರಿಯಲ್ಲಿ ಭರ್ತಿ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಹುದ್ದೆಗಳ ವಿವರ
- ಜನರಲ್ ಮ್ಯಾನೇಜರ್ (ಸಿಗ್ನಲಿಂಗ್/ ಟೆಲಿಕಾಂ) 1
- ಜನರಲ್ ಮ್ಯಾನೇಜರ್ (ಆಪರೇಷನ್) 1
- ಡೆಪ್ಯೂಟಿ ಜನರಲ್ ಮ್ಯಾನೇಜರ್ (ಸೇಫ್ಟಿ) 1
- ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಸ್‌ಎಸ್‌ಎಂ) 1
- ಡೆಪ್ಯೂಟಿ ಜನರಲ್ ಮ್ಯಾನೇಜರ್ (ಎಎಫ್‌ಸಿ/ ಟೆಲಿ) 1
- ಡೆಪ್ಯೂಟಿ ಜನರಲ್ ಮ್ಯಾನೇಜರ್ (ಸ್ಟೋರ್ಸ್) 1
- ಡೆಪ್ಯೂಟಿ ಜನರಲ್ ಮ್ಯಾನೇಜರ್ (ಪಿ-ವೇ) 1
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಲು 15/1/2026 ಕೊನೆಯ ದಿನವಾಗಿದೆ. ಅರ್ಜಿ, ಸಹಿ ಮಾಡಿದ ರಶೀದಿಯನ್ನು ಅಗತ್ಯ ದಾಖಲೆಗಳ ಜೊತೆ ಸಲ್ಲಿಕೆ ಮಾಡಲು 20/1/2026ರ ಸಂಜೆ 4 ಗಂಟೆ ಕೊನೆ ದಿನ.
ಹೆಚ್ಚಿನ ಮಾಹಿತಿ, ಅರ್ಹತೆ, ವೇತನ ಮುಂತಾದ ವಿವರಗಳಿಗೆ ಅಭ್ಯರ್ಥಿಗಳು www.bmrc.co.in ವೆಬ್ ಸೈಟ್‌ನಲ್ಲಿ ಕೆರಿಯರ್ ಸೆಕ್ಷನ್‌ಗೆ ಭೇಟಿ ನೀಡಬಹುದು.
ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಮಕ್ಕಳ ಆರೈಕೆ ಕ್ಷೇತ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು. ಪ್ರತಿ ಪ್ರಕರಣಕ್ಕೆ ರೂ. 3000ಗಳ ಸಂಭಾವನೆ ನೀಡಲಾಗುವುದು.
ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಮಾಣ ಪತ್ರಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿರುತ್ತಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


