ಶಿವಮೊಗ್ಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದು. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಪ್ರವಾಸಕ್ಕಾಗಿ ಪ್ರತಿದಿನ ನೂರಾರು ಜನರು ಆಗಮಿಸುತ್ತಾರೆ. ವಿಶ್ವ ವಿಖ್ಯಾತ ಜೋಗ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳು ಜಿಲ್ಲೆಯಲ್ಲಿವೆ. ಈಗ ಶಿವಮೊಗ್ಗ ಪ್ರವಾಸ ಕೈಗೊಳ್ಳುವ ಜನರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಟೋ ರಿಕ್ಷಾ ಸಂಘಗಳು ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಅವರು, “ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ನಗರದ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ” ಎಂದು ಹೇಳಿದರು.
“ಈಗಾಗಲೇ ನಗರದ ರೈಲ್ವೆ ನಿಲ್ದಾಣದ ಬಳಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಇದೇ ರೀತಿಯಲ್ಲಿ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲೂ ಪ್ರೀ ಪೈಯ್ಡ್ ಕೌಂಟರ್ ತೆರೆಯಲು ಮುಂದಾಗಿದ್ದು, ಇನ್ನು ಮುಂದೆ ಬಸ್ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದು” ಎಂದರು.
ಜನವರಿಯಲ್ಲಿ ಆರಂಭ: ಜಿಲ್ಲಾಧಿಕಾರಿಗಳು, “ಜನವರಿ 15ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರೀ-ಪೈಯ್ಡ್ ಆಟೋ ಕೌಂಟರ್ ಪ್ರಾರಂಭಿಸುವಂತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು ಹಾಗೂ ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹೀರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು” ಎಂದು ತಿಳಿಸಿದರು.
“ಮುಂಜಾನೆ 4.45, ಬೆಳಗ್ಗೆ 11 ಗಂಟೆ, ಸಂಜೆ 7.30 ಹಾಗೂ ರಾತ್ರಿ 9.30 ರ ಸಮಯದಲ್ಲಿ ಪ್ರಯಾಣಿಕರು ಮನೆಗೆ ತೆರಳಲು ಆಟೋ ರಿಕ್ಷಾಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಹಾಗಾಗಿ ರೈಲ್ವೆ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿ ಹಾಗೂ ಕೌಂಟರ್‌ನಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ” ಎಂದು ಸೂಚನೆ ನೀಡಿದರು.
“ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಬೇಕು. ಜಿಲ್ಲೆಯಲ್ಲಿರುವ ಆಟೋ ಚಾಲಕರು ಕಡ್ಡಾಯವಾಗಿ ಪರವಾನಗಿ ಮತ್ತು ಬ್ಯಾಡ್ಜ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರಿಯಾಗಿಟ್ಟುಕೊಂಡು ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು. ಪ್ರೀ ಪೈಯ್ಡ್ ಆಟೋ ರಿಕ್ಷಾಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈಲ್ವೆ ಹಾಗೂ ಬಸ್ ನಿಲ್ದಾಣಗಳ ಒಳಗೂ ಹೊರಗೂ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕುರಿತು ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇದಕ್ಕೆ ಆಟೋ ಸಂಘಗಳು ಕೂಡ ಸಹಕಾರ ನೀಡಬೇಕು” ಎಂದು ಹೇಳಿದರು.
ಶಿವಮೊಗ್ಗ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದೆ. ಶಿವಮೊಗ್ಗ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಇನ್ನಷ್ಟು ಪ್ರವಾಸಿಗರನ್ನು ಜಿಲ್ಲೆಗೆ ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವವರು ಬಸ್ ಮೂಲಕ ಆಗಮಿಸಿದರೆ ಅವರಿಗೆ ಅನುಕೂಲವಾಗಲು ಪ್ರೀ-ಪೇಯ್ಡ್ ಆಟೋ ರಿಕ್ಷಾ ಕೌಂಟರ್‌ಗಳನ್ನು ಆರಂಭಿಸಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


