Wednesday, September 23, 2026
spot_img
More
    spot_img
    HomeLatest newsಭಾರತಕ್ಕೆ ಮತ್ತೊಂದು ಐತಿಹಾಸಿಕ ಜಯ: ಮುಂಬೈ ದಾಳಿಕೋರ ತಹಾವೂರ್‌ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಸುಪ್ರೀಂ ಅನುಮತಿ

    ಭಾರತಕ್ಕೆ ಮತ್ತೊಂದು ಐತಿಹಾಸಿಕ ಜಯ: ಮುಂಬೈ ದಾಳಿಕೋರ ತಹಾವೂರ್‌ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಸುಪ್ರೀಂ ಅನುಮತಿ

    ವಾಷಿಂಗ್ಟನ್:‌ ಕಳೆದ 2008ರಲ್ಲಿ ನಡೆದ ಮುಂಬೈ ತಾಜ್‌ ಹೋಟೆಲ್‌ನಲ್ಲಿ ಬ್ಲಾಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಕಾನೂನು ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ.

    ಪ್ರಕರಣದ ಪ್ರಮುಖ ಅಪರಾಧಿ ತಹಾವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೇರಿಕಾ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

    ಕಳೆದ 2008ರಲ್ಲಿ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನ್‌ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಇದೀಗ ಭಾರತಕ್ಕೆ ಗಡೀಪಾರು ಮಾಡಲು ಅಮೇರಿಕಾ ಸುಪ್ರೀಂಕೋರ್ಟ್‌ ಒಪ್ಪಿಗೆ ನೀಡಿದೆ.

    ರಾಣಾ ಪ್ರಸ್ತುತ ಲಾಸ್‌ ಎಂಜಲೀಸ್‌ನ ಮೆಟ್ರೊಪಾಲಿಟನ್‌ ಡಿಟೆನ್ಷನ್‌ ಸೆಂಟರ್‌ನಲ್ಲಿ ಬಂಧಿತನಾಗಿದ್ದಾನೆ. ಕಳೆದ ತಿಂಗಳು ಕ್ಯಾಲಿಪೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್‌ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು.

    ಮುಂಬೈ ದಾಳಿ: 2008ರ ನವೆಂಬರ್.‌26ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್‌ ರ ತೊಯ್ಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಬಾಂಬ್‌ ಸ್ಫೋಟ ನಡೆಸಿ 166 ಜನರನ್ನು ಕೊಂದಿದ್ದರು. 300ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading