ಬೆಂಗಳೂರು: ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ. ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ? ಆತ ನನ್ನ ಹೆಸರು ತೆಗೆದುಕೊಂಡರೆ ದೊಡ್ಡವನಾಗುತ್ತಾನೆಯೇ? ನಾನು ಸಂಪರ್ಕದಲ್ಲಿ ಇರುವುದನ್ನು ಆತ ನೋಡಿದ್ದಾನೆಯೇ? ಆತನೇ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ. ನಾನು ಯಾವುದನ್ನು ಬಹಿರಂಗಗೊಳಿಸಲು ಹೋಗುವುದಿಲ್ಲ ಎಂದು ಕಿಡಿಕಾರಿದರು.
ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ಈಗ ಅವರನ್ನು ನಾನು ಸಂಪರ್ಕ ಮಾಡಿಲ್ಲ ಎಂದರು.
ಕೆಲವು ಸಚಿವರು ಶ್ರೀರಾಮುಲು ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿರುವ ಬಗ್ಗೆ ಕೇಳಿದಾಗ ನನ್ನ ಮುಂದೆ ಈ ವಿಚಾರ ಪ್ರಸ್ತಾಪವಾಗಲಿ, ಆಗ ಚರ್ಚೆ ಮಾಡೋಣ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


