ಬೆಂಗಳೂರು: ಎಚ್ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಎಚ್ಎಎಲ್ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ಸುದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮಾಹಿತಿ ಪ್ರಕಾರ ಬೆಂಗಳೂರು ದಕ್ಷಿಣ ಭಾಗದಲ್ಲಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಬೆಂಗಳೂರು ನಗರದ ಜನಪ್ರತಿನಿಧಿಗಳ ನಿಯೋಗ ದಕ್ಷಿಣ ಭಾಗದಲ್ಲೇ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಮನವಿ ಸಲ್ಲಿಸಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


