Tuesday, November 3, 2026
spot_img
More
    spot_img
    HomeTop Storyದೆಹಲಿ ವಿಧಾನಸಭೆಯಲ್ಲಿ ಗದ್ದಲ, ಕೋಲಾಹಲ: 15 ಮಂದಿ ಎಎಪಿ ಶಾಸಕರು ಅಮಾನತು

    ದೆಹಲಿ ವಿಧಾನಸಭೆಯಲ್ಲಿ ಗದ್ದಲ, ಕೋಲಾಹಲ: 15 ಮಂದಿ ಎಎಪಿ ಶಾಸಕರು ಅಮಾನತು

    ನವದೆಹಲಿ: ಮದ್ಯ ನೀತಿ ಹಗರಣದ ಕುರಿತು ಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಜೊತೆಗೆ ಗದ್ದಲದ ವೇಳೆ ಮಾಜಿ ಸಿಎಂ ಅತಿಶಿ ಸೇರಿದಂತೆ 15 ಮಂದಿ ಎಎಪಿ ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ.

    ಫೆಬ್ರವರಿ.5ರ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡ ಕೆಲವು ಕೆಲವು ಉನ್ನತ ವ್ಯಕ್ತಿಗಳಲ್ಲಿ ಒಬ್ಬರಾದ ಹಿರಿಯ ಎಎಪಿ ನಾಯಕ ಗೋಪಾಲ್‌ ರೈ ಅವರನ್ನು ಸಹ ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ.

    ವಿಧಾನಸಭೆಯನ್ನು ಉದ್ದೇಶಿಸಿ ಲೆಫ್ಟಿನೆಂಟ್‌ ಗೌವರ್ನರ್‌ ವಿ.ಕೆ.ಸಕ್ಸೇನಾ ಅವರ ಆರಂಭಿಕ ಭಾಷಣದ ವೇಳೆ ಗದ್ದಲ ಪ್ರಾರಂಭವಾಯಿತು. ನೂತನ ಸಿಎಂ ರೇಖಾ ಗುಪ್ತಾ ಅವರ ಕಚೇರಿಯಿಂದ ಡಾ.ಬಿ.ಆರ್.‌ಅಂಬೇಡ್ಕರ್‌ ಹಾಗೂ ಭಗತ್‌ ಸಿಂಗ್‌ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಎಎಪಿ ಶಾಸಕರು ಜೈಭೀಮ್‌ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್‌ ಮತ್ತು ಭಗತ್‌ಸಿಂಗ್‌ ಅವರ ಛಾಯಾಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

    ಈ ಗದ್ದಲದ ಮಧ್ಯೆ ಎಎಪಿಯ 15 ಮಂದಿ ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಯಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search