ಮೈಸೂರು: ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷವನ್ನು ಕಾರ್ಯಕರ್ತರು ಕಟ್ಟಿ ಬೆಳೆಸಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಎಲ್ಲಾ ಕಾರ್ಯಕರ್ತರಿಗೆ ಅಧಿಕಾರ ಕೊಡಿಸುವುದು ನಮ್ಮ ಗುರಿ. ರಾಜ್ಯದಲ್ಲಿ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತಿದ್ದೇನೆ. ಮೊದಲು ಎಲ್ಲಾ ರೀತಿಯ ಸಂಘಟನೆಯಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಎಂಬುದು ಅಪ್ರಸ್ತುತ ಎಂದು ಹೇಳಿದರು.
ಇನ್ನು ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಅವರು ಅಸಹಾಯಕರಾಗಿ ಹೇಳಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಯುವಕನ ಗಡಿಪಾರಿಗೆ ಚಿಂತನೆ ಮಾಡುತ್ತಿದ್ದಾರೆ. ಅಂತಹ ಗಡಿಪಾರು ಮಾಡುವುದಾದರೆ ನಮ್ಮ ಪಕ್ಷದ ಪೇಜ್ ಅಲ್ಲೂ ಹಲವು ಪೋಸ್ಟ್ ಹಾಕುತ್ತಾರೆ. ನಿತ್ಯವೂ ಪಕ್ಷದ ವಿರುದ್ಧ ಕ್ರಮ ಆಗುತ್ತೆ. ಈ ಗಲಾಟೆ ಪೂರ್ವನಿಯೋಜಿತ ಕೃತ್ಯ ಎಂದು ಗಂಭೀರ ಆರೋಪ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


