Wednesday, November 4, 2026
spot_img
More
    spot_img
    HomeLatest newsಏರ್‌ಪೋರ್ಟ್‌ನಲ್ಲಿ ಕೆಲಸ ಮಾಡಲು ಆಸೆಯಿದೆಯಾ? ಯಾವುದೇ ಲಿಖಿತ ಪರೀಕ್ಷೆ ಇಲ್ಲ;ಉತ್ತಮ ಸಂಬಳ ತಕ್ಷಣ ಅರ್ಜಿ ಸಲ್ಲಿಸಿ!

    ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡಲು ಆಸೆಯಿದೆಯಾ? ಯಾವುದೇ ಲಿಖಿತ ಪರೀಕ್ಷೆ ಇಲ್ಲ;ಉತ್ತಮ ಸಂಬಳ ತಕ್ಷಣ ಅರ್ಜಿ ಸಲ್ಲಿಸಿ!

    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಹಲವಾರು ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ ಮತ್ತು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳನ್ನು chqrectt@aai.aero ಇಮೇಲ್ ಐಡಿಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 19, 2025 ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನಾಂಕವನ್ನು ಏಪ್ರಿಲ್ 2, 2025 ಎಂದು ನಿಗದಿಪಡಿಸಲಾಗಿದೆ. ಈ ನೇಮಕಾತಿ ಅಭಿಯಾನದಡಿ ಒಟ್ಟು 20 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಕೆಲಸ ಪಡೆಯಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಸ್ವಯಂ-ದೃಢೀಕೃತ ಪ್ರತಿಗಳೊಂದಿಗೆ ಅರ್ಜಿಯನ್ನು chqrectt@aai.aero ಇಮೇಲ್ ಐಡಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮತ್ತು ವಿವರವಾದ ಅಧಿಸೂಚನೆಯನ್ನು ಪರಿಶೀಲಿಸಲು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ http://www.aai.aero ಗೆ ಭೇಟಿ ನೀಡಿ.

    ಹುದ್ದೆಯ ಹೆಸರು- ಸಲಹೆಗಾರ ಹುದ್ದೆ (Consultant)

    ಎಷ್ಟು ಹುದ್ದೆಗಳು – 20

    ಆಯ್ಕೆ ಆದವರಿಗೆ ಪ್ರತಿ ತಿಂಗಳ ಸಂಬಳ- 75,000 ರೂಪಾಯಿ

    ವಯಸ್ಸಿನ ಮಿತಿ;ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 65 ವರ್ಷಗಳು

    ಆಯ್ಕೆ ಪ್ರಕ್ರಿಯೆ

    ದಾಖಲೆ ಪರಿಶೀಲಿಸಿ ಹೆಸರುಗಳ ಶಾರ್ಟ್‌ಲಿಸ್ಟ್

    ವೈಯಕ್ತಿಕ ಸಂದರ್ಶನ

    ಸಂದರ್ಶನದ ಕಾರ್ಯಕ್ಷಮತೆ ಗಣನೆಗೆ ಎಗೆದುಕೊಳ್ಳಲಾಗುತ್ತದೆ

    ಮುಖ್ಯ ದಿನಾಂಕಗಳು

    ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ- 19 ಮಾರ್ಚ್ 2025

    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ- 02 ಏಪ್ರಿಲ್ 2025

    ಸಂದರ್ಶನ ಮಾಡುವ ದಿನಾಂಕವನ್ನು ಘೋಷಣೆ ಮಾಡಲಾಗುವುದು

    ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು:

    ಉದ್ಯೋಗ ಆಕಾಂಕ್ಷಿಯು 65 ವರ್ಷಗಳ ಒಳಗೆ ಇರಬೇಕು.

    ರಾಜ್ಯ ಅಥವಾ ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು

    ರಕ್ಷಣಾ ಇಲಾಖೆಯಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿರುವವರಿಗೆ ಅವಕಾಶ.

    ಉದ್ಯೋಗದಿಂದ ನಿವೃತ್ತಿ ಪಡೆದಿದ್ದು ಕನಿಷ್ಠ ಒಂದು ತಿಂಗಳು ಕಳೆದಿರಬೇಕು.

    AAIಯಲ್ಲಿ 5 ವರ್ಷಕ್ಕಿಂತ ಹೆಚ್ಚು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿರುವ ಅಭ್ಯರ್ಥಿಗಳು ಅನರ್ಹರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search