ಬೆಂಗಳೂರು; ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ರಾಜ್ಯದ ಮಹಿಳೆಯರಿಗಾಗಿ ಈ ಹಿಂದೆಯೂ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆ ಪೈಕಿ ಕರ್ನಾಟಕ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡಾ ಒಂದಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿ ಆಗಬೇಕು ಎನ್ನುವ ಉದ್ದೇಶಕ್ಕಾಗಿ ಉದ್ಯೋಗ ಯೋಜನೆ , ಸಾಲ ಸೌಲಭ್ಯ ಹಾಗು ಸಹಾಯಧನಗಳಂತಹ ಹಲವು ಯೋಜನೆಗಳನ್ನು ಪರಿಚಯಿಸಲಾಗಿದ್ದು, ಈಗ ಅದರಲ್ಲಿ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ನಿರುದ್ಯೋಗಿ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯೇ ಉದ್ಯೋಗಿನಿ ಯೋಜನೆಯಾಗಿದೆ.
ಇದು 2015-16ರಲ್ಲಿ ಜಾರಿಗೆ ಬಂದಿದೆ. ಉದ್ಯೋಗಿನಿ ಯೋಜನೆಯ ಮೂಲಕ ಮಹಿಳೆಯರಿಗೆ ಸ್ವ ಉದ್ಯೋಗ ಸ್ಥಾಪನೆಗೆ ಸಾಲವನ್ನು ನೀಡಲಾಗುತ್ತದೆ.ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗಂತ ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್‌ಲೈನ್‌ನಲ್ಲಿ ಅವಕಾಶವಿಲ್ಲ.ಸ್ವಯಂ ಉದ್ಯೋಗ ಮಾಡಲು ಬಯಸುವ ಮಹಿಳೆಯರು ಉದ್ಯೋಗಿನಿ ಯೋಜನೆ ಅಡಿಯಲ್ಲಿಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಮಹಿಳೆಗೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಮೂಲಕ ಸಾಲ ನೀಡಲಾಗುತ್ತದೆ. ಇದರಲ್ಲಿ ಪರಿಶಿಷ್ಠ ಪಂಗಡ/ ಪರಿಶಿಷ್ಠ ಜಾತಿಯ ಮಹಿಳೆಯರಿಗೆ 50%ರಷ್ಟು ಅಥವಾ ಗರಿಷ್ಠ 1,50,000 ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ. ಅಲ್ಲದೆ ಇತರ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಅಥವಾ ಗರಿಷ್ಠ 90,000 ರೂಪಾಯಿ ಸಬ್ಸಿಡಿ ದೊರೆಯಲಿದೆ.
ಯಾವೆಲ್ಲಾ ಉದ್ದೇಶಕ್ಕೆ ಸಾಲ ಲಭ್ಯ?
ಈ ಯೋಜನೆಯ ಅಡಿಯಲ್ಲಿ ಲಾಭದಾಯಕ ವ್ಯಾಪಾರ ಚಟುವಟಿಕೆಗಳಿಗೆ ಸಾಲವನ್ನು ಅನುಮೋದಿಸಿ, ಬೆಂಬಲ ನೀಡಲಾಗುತ್ತದೆ. ಸಾಲ ಲಭ್ಯವಿರುವ ಚಟುವಟಿಕೆಗಳಲ್ಲಿ ಬುಕ್‌ಬೈಂಡಿಂಗ್ ಮತ್ತು ನೋಟ್‌ಬುಕ್‌ಗಳ ತಯಾರಿಕೆ, ಸೀಮೆಸುಣ್ಣ ಮತ್ತು ಕ್ರಯೋನ್ ತಯಾರಿಕೆ, ಜಾಮ್, ಜೆಲ್ಲಿ, ಉಪ್ಪಿನಕಾಯಿ ತಯಾರಿಕೆ, ಪಾಪಡ್ ತಯಾರಿಕೆ, ಸೀರೆ ಮತ್ತು ಕಸೂತಿ ಕೆಲಸ, ಬಟ್ಟೆ ಮುದ್ರಣ ಮತ್ತು ಬಣ್ಣ ಹಾಕುವ ಕೆಲಸ, ಉಣ್ಣೆಯ ನೇಯ್ಗೆ ಮುಂತಾದವು ಸೇರಿವೆ. ಉದ್ಯೋಗಿನಿ ಯೋಜನೆಯು ಮಹಿಳೆಯರು ಸ್ವಯಂ ಉದ್ಯೋಗಿಗಳಿಗೆಾಗಿ ಅಭಿವೃದ್ಧಿಗೊಳ್ಳಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ.
ಬೇಕಾದ ದಾಖಲೆಗಳು
- ಅರ್ಜಿದಾರರ ಆಧಾರ್ ಕಾರ್ಡ್
- ಅರ್ಜಿದಾರರ ಜನನ ಪ್ರಮಾಣ ಪತ್ರ
- ವಿಳಾಸ ಹಾಗೂ ಆದಾಯ ಪುರಾವೆ (Income certificate)
- ಅರ್ಜಿ ಸಲ್ಲಿಸುವ ಮಹಿಳೆಯ ಬಿಪಿಎಲ್ ಕಾರ್ಡ್ ಜೆರಾಕ್ಸ್ ಪ್ರತಿ
- ಎಸ್‌ಟಿ/ ಎಸ್‌ಸಿ ಮಹಿಳೆಯರಾಗಿದ್ದರೆ ಜಾತಿ ಪ್ರಮಾಣಪತ್ರ ಕಡ್ಡಾಯ
- ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ
- ಬ್ಯಾಂಕ್ ಅಥವಾ NBFC ಇತರೆ ದಾಖಲೆಗಳು
ಈ ಯೋಜನೆಗೆ ಅರ್ಜಿ ಹಾಕಲು ಬೇಕಾಗಿರುವ ಅರ್ಹತೆಗಳು
- ಕರ್ನಾಟಕ ರಾಜ್ಯದ ಖಾಯಂ ನಾಗರಿಕ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಹರು
*ಕುಟುಂಬದ ಆದಾಯ ರೂ.1,50,000/- ಗಿಂತ ಕಡಿಮೆ ಇರಬೇಕು.
- 18 ವರ್ಷದಿಂದ 55 ವರ್ಷದೊಳಗಿನ ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಈ ಸಾಲ ಸೌಲಭ್ಯ ಲಭ್ಯ
*ಎಸ್‌ಸಿ/ ಎಸ್‌ಟಿ ವರ್ಗದವರು ಸಾಲ ಪಡೆಯಲು ವಾರ್ಷಿಕ ಆದಾಯವು 2 ಲಕ್ಷ ರೂಪಾಯಿಗಿಂತ ಕಡಿಮೆಯಾಗಿರಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


