ಬೆಂಗಳೂರು: ನಿನ್ನೆ ( ಏಪ್ರಿಲ್ 24 ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ರನ್ಗಳ ಗೆಲುವು ಕಂಡು ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿಯಲ್ಲಿ ಜಯ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅಬ್ಬರದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದ್ದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 206 ರನ್ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು.
ಇನ್ನು ಈ ರೋಚಕ ಹಣಾಹಣಿಯಲ್ಲಿ ಡೆತ್ ಓವರ್ಗಳಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿ ಕೈಬಿಟ್ಟುಹೋಗಿದ್ದ ಪಂದ್ಯವನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರದರ್ಶನಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಪಂದ್ಯದ ಗೆಲುವಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಡಿಹೊಗಳಿದ್ದಾರೆ.
ಎಂಥಹ ರೋಚಕ ಪಂದ್ಯ ಗೆದ್ದರು ನಮ್ಮ ಹುಡುಗ್ರು ʼಚಿನ್ನʼಸ್ವಾಮಿ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮನೆಯಲ್ಲಿ ಪಂದ್ಯ ಗೆದ್ದಿದ್ದಾರೆ ಇದೇ ರೀತಿ ಒಳ್ಳೆಯ ಪ್ರದರ್ಶನ ನೀಡಲಿ ಎಂದು ಹಾರೈಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


