ಬೆಂಗಳೂರು: ನಿನ್ನೆ ( ಏಪ್ರಿಲ್ 24 ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 42ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ರನ್‌ಗಳ ಗೆಲುವು ಕಂಡು ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿಯಲ್ಲಿ ಗೆಲುವು ಕಂಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅಬ್ಬರದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿದ್ದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 206 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು.
ಈ ಗೆಲುವಿನೊಂದಿಗೆ ಟೂರ್ನಿಯಲ್ಲಿನ ತನ್ನ ಆರನೇ ಗೆಲುವನ್ನು ಕಂಡ ಆರ್‌ಸಿಬಿ 12 ಅಂಕಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. ಇನ್ನು 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 10 ಅಂಕ ಪಡೆದಿರುವ ಮುಂಬೈ ಇಂಡಿಯನ್ಸ್ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಈ ಮೂಲಕ ಮೊನ್ನೆಯಷ್ಟೇ ಸನ್‌ರೈಸರ್ಸ್ ಮಣಿಸಿದ್ದ ಮುಂಬೈ ಇಂಡಿಯನ್ಸ್ ಆರ್‌ಸಿಬಿಯಷ್ಟೇ ಅಂಕ ಗಳಿಸಿ ಹೆಚ್ಚಿನ ನೆಟ್ ರನ್ ರೇಟ್ ಇದ್ದ ಕಾರಣ ಅಂಕಪಟ್ಟಿಯಲ್ಲಿ ಆರ್‌ಸಿಬಿಯನ್ನು ನಾಲ್ಕನೇ ಸ್ಥಾನಕ್ಕೆ ತಳ್ಳಿ ಮೂರನೇ ಸ್ಥಾನಕ್ಕೇರಿತ್ತು. ಇದೀಗ 24 ಗಂಟೆಯಲ್ಲಿ ಆರ್‌ಸಿಬಿ ಮತ್ತೆ ಮೂರನೇ ಸ್ಥಾನಕ್ಕೇರಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


