Saturday, September 19, 2026
spot_img
More
    spot_img
    HomeTop Storyಪ್ರಿಯಾಂಕ್‌ ಖರ್ಗೆ ಕಂಡರೆ ಬಿಜೆಪಿಯವರಿಗೆ ಭಯ; ಸಚಿವ ಶರಣ ಪ್ರಕಾಶ್‌ ಪಾಟೀಲ್‌ ವ್ಯಂಗ್ಯ

    ಪ್ರಿಯಾಂಕ್‌ ಖರ್ಗೆ ಕಂಡರೆ ಬಿಜೆಪಿಯವರಿಗೆ ಭಯ; ಸಚಿವ ಶರಣ ಪ್ರಕಾಶ್‌ ಪಾಟೀಲ್‌ ವ್ಯಂಗ್ಯ

    ಕಲಬುರಗಿ: ಈ ಹಿಂದೆ ಬಳ್ಳಾರಿಯಲ್ಲಿ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿರುವ ಬಿಜೆಪಿ ಪಕ್ಷದ ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.

    Advertisement

    ಕಲಬುರಗಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ನಾಯಕರು ಕಲಬುರಗಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ ಎಂದರೆ ರಿಪಬ್ಲಿಕ್ ಆಗುತ್ತದೆಯಾ, ಕಲಬುರಗಿ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಇತಿಹಾಸ ಏನು ಎಂದು ಗೊತ್ತಿದೆ. ನಾವು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡಿದ್ದೇವೆ ಹೊರತು ರಿಪಬ್ಲಿಕ್ ಮಾಡಿಲ್ಲ. ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ರಾಮುಲು ಇಲ್ಲಿ ಬಂದು ರಿಪಬ್ಲಿಕ್ ಆಪ್ ಕಲಬುರಗಿ ಬಗ್ಗೆ ಮಾತಾಡ್ತಾರೆ ಎಂದು ಕಿಡಿಕಾರಿದರು.

    ಇನ್ನು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಲ್ಕು ಬಾರಿ‌ ಪ್ರತಿಭಟನೆ ನಡೆಸಿದೆ. ಬಿಜೆಪಿಯವರ ಪ್ರತಿಭಟನೆಗಳು ಹಾಸ್ಯಾಸ್ಪದವಾಗಿವೆ. ಪ್ರಿಯಾಂಕ್ ಖರ್ಗೆ ಕಂಡ್ರೆ ಬಿಜೆಪಿಗೆ ಭಯ ಅನ್ನೋದು ಕಾಣಿಸ್ತಿದೆ ಎಂದು ಟಿಕಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading