ಮಡಿಕೇರಿ: ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಿದ್ದು, ಕೊಡಗು ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ವೇಗದ ಗಾಳಿಯೊಂದಿಗೆ ಸತತವಾಗಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
ವಾರಕ್ಕೂ ಮೊದಲೇ ಮಾನ್ಸೂನ್ ಕೇರಳ ಪ್ರವೇಶಿಸಿದ್ದು, ಈ ಬಾರಿ ಮೇ ತಿಂಗಳಿನಲ್ಲಿಯೇ ಅಬ್ಬರದ ಮಳೆಯಾಗಿದೆ. ಮಹಾಮಳೆ ಕಂಡು ಬೆರಗಾಗಿರುವ ಸ್ಥಳೀಯರು ಮೇ ತಿಂಗಳಿನಲ್ಲಿ ಈ ಪರಿ ಮಳೆ ಕಂಡಿರಲಿಲ್ಲ ಎಂದು ಮಳೆಯ ತೀವ್ರತೆಯನ್ನು ಬಿಚ್ಚಿಟ್ಟಿದ್ದಾರೆ.
ಇನ್ನು ಬ್ರಹ್ಮಗಿರಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು ತಲಕಾವೇರಿ ಹಾಗೂ ಭಾಗಮಂಡಲದಲ್ಲೂ ಅಬ್ಬರದ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.
ಭಾಗಮಂಡಲದ ಭಗಂಡೇಶ್ವರ ದೇವಾಲಯದ ಜಲಾವೃತವಾಗಿದೆ. ಇನ್ನು ಹೊಸದಾಗಿ ನಿರ್ಮಾಣವಾಗಿರುವ ಮೇಲ್ಸೇತುವೆಯ ಸಹಾಯದಿಂದ ಈ ಬಾರಿ ಭಾಗಮಂಡಲದ ಜನರಿಗೆ ಸಂಚಾರಕ್ಕೆ ಅಡ್ಡಿ ಇಲ್ಲದಂತಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


