Friday, November 13, 2026
spot_img
More
    spot_img
    HomeSportsCricketಕೇವಲ 20 ರನ್‌ ಬಾರಿಸಿದ್ರು ಅದಕ್ಕೆ ಸೋತೆವು; ಇಂಗ್ಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ ಸೋಲಿಗೆ ಕಾರಣ...

    ಕೇವಲ 20 ರನ್‌ ಬಾರಿಸಿದ್ರು ಅದಕ್ಕೆ ಸೋತೆವು; ಇಂಗ್ಲೆಂಡ್‌ ವಿರುದ್ಧದ ಪ್ರಥಮ ಟೆಸ್ಟ್‌ ಸೋಲಿಗೆ ಕಾರಣ ಯಾರೆಂದು ತಿಳಿಸಿದ ಗಿಲ್‌

    ಲೀಡ್ಸ್:‌ ನಿನ್ನೆ ( ಜೂನ್‌ 24 ) ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್‌ ( india vs england ) ತಂಡಗಳ ನಡುವಿನ ಪ್ರಥಮ ಟೆಸ್ಟ್‌ ಪಂದ್ಯದ ಅಂತಿಮ ದಿನದಾಟದಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

    ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಬಳಿಕ ಇಂಗ್ಲೆಂಡ್‌ 465 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್‌ಗಳ ಮುನ್ನಡೆ ಸಾಧಿಸಿತ್ತು.

    ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್‌ ರಾಹುಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಭಾರತ 364 ರನ್‌ ಗಳಿಸಿ ಆಲ್‌ಔಟ್ ಆಗಿ ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿತ್ತು. ಅತ್ತ ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್‌ ಡಕೆಟ್‌ ಅಬ್ಬರದ ಶತಕದ ನೆರವಿನಿಂದ 5 ವಿಕೆಟ್‌ ನಷ್ಟಕ್ಕೆ 373 ರನ್ ದಾಖಲಿಸಿತು.

    ಈ ಮೂಲಕ ಭಾರತ ನೂತನ ನಾಯಕ ಗಿಲ್‌ ನಾಯಕತ್ವದಡಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿಯೇ ಹೀನಾಯ ಸೋಲುಂಡಿದ್ದು, ಪಂದ್ಯ ಮುಗಿದ ಬಳಿಕ ಗಿಲ್‌ ಸೋಲಿಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

    ಅತ್ಯುತ್ತಮ ಟೆಸ್ಟ್ ಪಂದ್ಯವಾಗಿತ್ತು ಎಂದು ಪಂದ್ಯವನ್ನು ಹೊಗಳಿದ ಗಿಲ್‌ ನಮಗೆ ಗೆಲ್ಲುವ ಅವಕಾಶವಿತ್ತು, ಕ್ಯಾಚ್‌ ಬಿಟ್ಟದ್ದು ಹಾಗೂ ಕೆಳ ಕ್ರಮಾಂಕದ ಆಟಗಾರರು ರನ್‌ ಬಾರಿಸಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ 430 ರನ್‌ ಆಸುಪಾಸು ಟಾರ್ಗೆಟ್‌ ನೀಡುತ್ತೇವೆ ಎಂದುಕೊಂಡಿದ್ದೆವು, ಆದರೆ ಕೊನೆಯ 6 ವಿಕೆಟ್‌ಗಳಲ್ಲಿ ಕೇವಲ 20ರಿಂದ 25 ಹರಿದು ಬಂತು ಎಂದರು. ಈ ಮೂಲಕ ಸೋಲಿಗೆ ಕೆಳ ಕ್ರಮಾಂಕದ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿದ್ದು ಹಾಗೂ ಕಳಪೆ ಫೀಲ್ಡಿಂಗ್‌ ಕಾರಣ ಎಂದರು.

    ಕಾಲಲ್ಲಿ ಇರುವುದನ್ನು ಯಾವಾಗ ಬಿಚ್ಚಿ ಹೊಡಿತಾರೋ ಗೊತ್ತಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ವಿವಾದಾತ್ಮಕ ಹೇಳಿಕೆ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search