Sunday, November 8, 2026
spot_img
More
    spot_img
    HomeSportsCricketಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಇಷ್ಟು ಶತಕ ಬಾರಿಸಿ ಯಾರೂ ಸೋತಿರಲಿಲ್ಲ; ಕೆಟ್ಟ ದಾಖಲೆ ಬರೆದ ಭಾರತ!

    ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಇಷ್ಟು ಶತಕ ಬಾರಿಸಿ ಯಾರೂ ಸೋತಿರಲಿಲ್ಲ; ಕೆಟ್ಟ ದಾಖಲೆ ಬರೆದ ಭಾರತ!

    ಲೀಡ್ಸ್:‌ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿರುವ ಭಾರತ ( india vs england ) ಹೆಡಿಂಗ್ಲೆಯಲ್ಲಿ ನಡೆದ ಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಹೀನಾಯ ಸೋಲುಂಡಿದೆ.

    ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಆಲ್‌ಔಟ್‌ ಆಗಿತ್ತು. ಬಳಿಕ ಇಂಗ್ಲೆಂಡ್‌ 465 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್‌ಗಳ ಮುನ್ನಡೆ ಸಾಧಿಸಿತ್ತು.

    ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್‌ ರಾಹುಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಭಾರತ 364 ರನ್‌ ಗಳಿಸಿ ಆಲ್‌ಔಟ್ ಆಗಿ ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿತ್ತು. ಅತ್ತ ಇಂಗ್ಲೆಂಡ್‌ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್‌ ಡಕೆಟ್‌ ಅಬ್ಬರದ ಶತಕದ ನೆರವಿನಿಂದ 5 ವಿಕೆಟ್‌ ನಷ್ಟಕ್ಕೆ 373 ರನ್ ದಾಖಲಿಸಿತು.

    ಹೀಗೆ ಉತ್ತಮ ಮೊತ್ತ ಕಲೆಹಾಕಿದರೂ ಸಹ ಭಾರತ ಹೀನಾಯವಾಗಿ ಸೋಲುಂಡಿದೆ. ಈ ಮೂಲಕ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಹಾಗೂ ರವಿಚಂದ್ರನ್‌ ಅಶ್ವಿನ್‌ ನಿವೃತ್ತಿ ನಂತರ ಆಡಿದ ಮೊದಲ ಪಂದ್ಯದಲ್ಲೇ ಭಾರತ ಮುಗ್ಗರಿಸಿದ್ದು, ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಇಂತಹ ಇನ್ನಿಂಗ್ಸ್‌ ಆಡಿ ಯಾವುದೇ ತಂಡವೂ ಕಂಡಿರದ ಸೋಲನ್ನು ಕಂಡಿದೆ.

    ಹೌದು, ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ 5 ಶತಕಗಳನ್ನು ಬಾರಿಸಿದ ಯಾವ ತಂಡವೂ ಸೋತಿರಲಿಲ್ಲ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್‌, ಶುಭ್‌ಮನ್ ಶತಕ ಬಾರಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್‌ ರಾಹುಲ್‌ ಶತಕ ಬಾರಿಸಿದರು ಹಾಗೂ ರಿಷಭ್‌ ಪಂತ್‌ ಎರಡೂ ಇನ್ನಿಂಗ್ಸ್‌ನಲ್ಲಿಯೂ ಶತಕ ಬಾರಿಸಿದರು. ಆದರೂ ಸಹ ಭಾರತ ಪಂದ್ಯ ಗೆಲ್ಲಲಾಗದೇ ಇರುವುದು ಕೆಳ ಕ್ರಮಾಂಕದ ಬ್ಯಾಟಿಂಗ್‌ ವೈಫಲ್ಯವನ್ನು ಎತ್ತಿ ತೋರುತ್ತಿದೆ.

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ

    ಕಾಲಲ್ಲಿ ಇರುವುದನ್ನು ಯಾವಾಗ ಬಿಚ್ಚಿ ಹೊಡಿತಾರೋ ಗೊತ್ತಿಲ್ಲ; ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ವಿವಾದಾತ್ಮಕ ಹೇಳಿಕೆ

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search