ಲೀಡ್ಸ್: ಭಾರತ ಹಾಗೂ ಇಂಗ್ಲೆಂಡ್ ( india vs england ) ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1 – 0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್ ಹಾಗೂ ರಿಷಭ್ ಪಂತ್ ಶತಕಗಳ ನೆರವಿನಿಂದ ಆಲ್‌ಔಟ್ ಆಗಿತ್ತು. ಬಳಿಕ ಇಂಗ್ಲೆಂಡ್ 465 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 6 ರನ್‌ಗಳ ಮುನ್ನಡೆ ಸಾಧಿಸಿತ್ತು.
ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಶತಕಗಳ ನೆರವಿನಿಂದ ಭಾರತ 364 ರನ್ ಗಳಿಸಿ ಆಲ್‌ಔಟ್ ಆಗಿ ಇಂಗ್ಲೆಂಡ್‌ಗೆ 371 ರನ್‌ಗಳ ಗುರಿಯನ್ನು ನೀಡಿತ್ತು. ಅತ್ತ ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್ ಅಬ್ಬರದ ಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 373 ರನ್ ದಾಖಲಿಸಿತು.
ತಂಡದ ಪರ ಮೊದಲ ಇನ್ನಿಂಗ್ಸ್‌ನಲ್ಲಿ 101 ರನ್ ಬಾರಿಸಿ ಅಬ್ಬರಿಸಿದ ಜೈಸ್ವಾಲ್ ಭಾರೀ ಮೆಚ್ಚುಗೆ ಪಡೆದುಕೊಂಡರು. ಆಂಗ್ಲರ ನೆಲದಲ್ಲಿ ನಡೆದ ಮೊದಲ ಪಂದ್ಯದಲ್ಲೇ ಸೆಂಚುರಿ ಬಾರಿಸಿ ತಂಡಕ್ಕೆ ಭರ್ಜರಿ ಆರಂಭ ಕಟ್ಟಿಕೊಟ್ಟರು. ಹೀಗೆ ಮೊದಲಿಗೆ ಹೀರೊ ಆಗಿದ್ದ ಯಶಸ್ವಿ ಜೈಸ್ವಾಲ್ ಎರಡನೇ ಇನ್ನಿಂಗ್ಸ್ ವೇಳೆ 5 ಬಾರಿ ಕ್ಯಾಚ್ ಬಿಟ್ಟು ವಿಲನ್ ಆಗಿದ್ದಾರೆ.
ಪದೇಪದೇ ಕ್ಯಾಚ್ ಬಿಟ್ಟ ಯಶಸ್ವಿ ಜೈಸ್ವಾಲ್‌ನಿಂದಲೇ ಭಾರತ ಈ ಪಂದ್ಯವನ್ನು ಸೋತಿದ್ದು, ಆತನನ್ನು ತಂಡದಿಂದ ಆಚೆ ಹಾಕಿ ಎಂದು ಕ್ರಿಕೆಟ್ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


