Wednesday, November 4, 2026
spot_img
More
    spot_img
    HomeEntertainmentಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ನಲ್ಲಿ ‘ಸೆಪ್ಟೆಂಬರ್ 10’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ

    ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ನಲ್ಲಿ ‘ಸೆಪ್ಟೆಂಬರ್ 10’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ

    ಓಂ ಸಾಯಿಪ್ರಕಾಶ್ ಅವರ ನಿರ್ದೇಶನ ಮತ್ತು ನಿರ್ಮಾಣದ ‘ಸೆಪ್ಟೆಂಬರ್ 10’ ಚಿತ್ರವು ಬಿಡುಗಡೆಗೂ ಮುನ್ನವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಅತ್ಯುತ್ತಮ ಚಿತ್ರವಾಗಿ ಪ್ರಶಸ್ತಿಗೆ ಭಾಜನವಾಗಿದೆ. ಆತ್ಮಹತ್ಯೆ ಸಮಸ್ಯೆಗಳ ಪರಿಹಾರವಲ್ಲ ಎಂಬ ಮಹತ್ವದ ಸಂದೇಶವನ್ನು ಹೊಂದಿರುವ ಈ ಚಿತ್ರವು, ಯುನಿವರ್ಸಲ್ ಫಿಲಂ ಮೇಕರ್ಸ್ ಕೌನ್ಸಿಲ್ ಮತ್ತು ಜೆನಸಿಸ್ ಅಲ್ಟಿಮಾ ದುಬೈ ಸಹಯೋಗದಲ್ಲಿ ಹೈದರಾಬಾದ್‌ನ ಚಾರ್ ಮಿನಾರ್ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ.

    ಜುಲೈ 26 ಮತ್ತು 27 ರಂದು ಹೈದರಾಬಾದ್‌ನ ಪ್ರಸಾದ್ ಫಿಲಂ ಲ್ಯಾಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಮತ್ತು ನಿರ್ಮಾಪಕ ಓಂ ಸಾಯಿಪ್ರಕಾಶ್ ಈ ಗೌರವ ಸ್ವೀಕರಿಸಲಿದ್ದಾರೆ. ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಡಾ. ಎಸ್. ರಾಜು ಬೆಂಬಲ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ನಿರ್ದೇಶಕ ಸಾಯಿಪ್ರಕಾಶ್, 2020 ರಲ್ಲಿ ಈ ಸಿನಿಮಾವನ್ನು ಪ್ರಾರಂಭಿಸಿದ್ದೆ. ಆದರೆ ಕೋವಿಡ್ ಕಾರಣದಿಂದ ಬಿಡುಗಡೆಯಾಗಲಿಲ್ಲ. ಈಗ ಎಲ್ಲರ ಸಹಕಾರದಿಂದ ಸಿನಿಮಾ ಬಿಡುಗಡೆಯ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯ ದಿನಾಂಕ ಪ್ರಕಟಿಸಲಾಗುತ್ತದೆ. ಈ ನಡುವೆ ಸಿನಿಮಾ ಪ್ರಶಸ್ತಿ ಗೆದ್ದಿರುವುದು ಸಂತೋಷದ ವಿಚಾರ ಎಂದು ತಿಳಿಸಿದ್ದಾರೆ.ಚಿತ್ರದಲ್ಲಿ ನಟಿ ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಜೆಜಿ. ಕೃಷ್ಣ ಛಾಯಾಗ್ರಹಣ ನಿರ್ವಹಿಸಿದ್ದು, ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದೆ.

    ರಾಷ್ಟ್ರಪತಿ ಮುರ್ಮು ಅವರಿಂದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆಚೀಟಿ ಅನಾವರಣ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search