Monday, November 2, 2026
spot_img
More
    spot_img
    HomeLatest newsಜುಲೈ 26ರಂದು ಶನಿವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್‌ ಕಟ್‌

    ಜುಲೈ 26ರಂದು ಶನಿವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್‌ ಕಟ್‌

    ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜುಲೈ 26, ಶನಿವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ (KPTCL) ವತಿಯಿಂದ 66/11 ಕೆವಿ ಐಐಎಸ್ಸಿ (IISC) ಉಪಕೇಂದ್ರ ವ್ಯಾಪ್ತಿಯಲ್ಲಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಮಳೆಗಾಲದ ಅನಿಶ್ಚಿತತೆ ಹಾಗೂ ನಿರ್ವಹಣಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಕಡಿತ ನಿರ್ಧರಿಸಲಾಗಿದೆ. ವಿದ್ಯೂತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಪ್ರದೇಶಗಳ ನಿವಾಸಿಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ.

    ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಪ್ರಕಟಿಸಿದಂತೆ, ತುರ್ತು ನಿರ್ವಹಣಾ ಕಾಮಗಾರಿಗಾಗಿ ಬೆಂಗಳೂರು ನಗರದ ಕೆಲವು ಪ್ರಮುಖ ಪ್ರದೇಶಗಳಲ್ಲಿ ಜುಲೈ 26, 2025 (ಶನಿವಾರ)ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ

    ಶನಿವಾರ ಎಲ್ಲೆಲ್ಲಾ ಪವರ್ ಕಟ್

    ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್ ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್ ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯ ರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

    ಇನ್ನು, ವಿದ್ಯುತ್ ಪೂರೈಕೆಯಲ್ಲಿ ಕಡಿತ ಉಂಟಾಗುವ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ತಮ್ಮ ಮೊಬೈಲ್ ಫೋನ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ಅಗತ್ಯವಿರುವ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಂಡಿರಬೇಕು. ವಿದ್ಯುತ್ ಕಡಿತದ ಸಮಯದಲ್ಲಿ ಈ ಉಪಕರಣಗಳ ಬಳಕೆಯನ್ನು ಜನರು ಸಾಧ್ಯವಾದಷ್ಟು ಮುಂದೂಡಿಕೊಳ್ಳಬೇಕು ಈ ಸಮಯದಲ್ಲಿ ವಿದ್ಯುತ್ ಉಪಕರಣಗಳನ್ನು ಅವಲಂಬಿಸುವುದನ್ನ ತಪ್ಪಿಸುವಂತೆ ಬೆಸ್ಕಾಂ ಮುಂಜಾಗ್ರತಾ ಕ್ರಮವಾಗಿ ಸೂಚನೆ ನೀಡಿದೆ.

    ಮನೆಯಲ್ಲಿಯೇ ಆಯುಷ್ಮಾನ್ ಕಾರ್ಡ್ ಪಡೆಯುವ ಸರಳ ಮಾರ್ಗ: ಅರ್ಜಿ ಪ್ರಕ್ರಿಯೆ, ದಾಖಲೆಗಳು ಮತ್ತು ಸಂಪೂರ್ಣ ಮಾಹಿತಿ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search