ಬೆಳ್ಳುಳ್ಳಿ ನಮ್ಮ ಅಡುಗೆಗಳಲ್ಲಿ ಅತ್ಯಂತ ಉಪಯುಕ್ತವಾದ ಹಾಗೂ ಅಗತ್ಯ ಪದಾರ್ಥಗಳಲ್ಲಿ ಒಂದಾಗಿದೆ. ಅಡುಗೆಯಲ್ಲಿ ರುಚಿಯನ್ನು ಹೆಚ್ಚಿಸುವುದರ ಜೊತೆಗೆ, ಇದು ಅನೇಕ ಆರೋಗ್ಯ ಕಾರಕ ಗುಣಗಳನ್ನು ಹೊಂದಿದೆ. ಹುರಿದು ಅಥವಾ ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಅತ್ಯುತ್ತಮ ಆರೋಗ್ಯ ಪ್ರಯೋಜনಗಳನ್ನು ಪಡೆಯಬಹುದು.ಇದು ಒಂದೆಡೆ ಆಯುರ್ವೇದದಲ್ಲಿ ಬಹುಪಾಲು ಬಳಸಲಾಗುವ ಗಿಡಮೂಲಿಕೆಯೂ ಹೌದು. ಬೆಳ್ಳುಳ್ಳಿ ಚಟುವಟಿಕೆಗಳು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ, ರಕ್ತವನ್ನು ಶುದ್ಧೀಕರಿಸುತ್ತದೆ, ಹಾಗೂ ಹೃದಯ ಆರೋಗ್ಯವನ್ನು ಸುಧಾರಿಸುತ್ತದೆ. ಬೆಳ್ಳುಳ್ಳಿಯು ಹೃದಯಾಘಾತ, ಕೆಮ್ಮು, ಉಸಿರಾಟ ತೊಂದರೆ, ಕಡಿಮೆ ಲೈಂಗಿಕ ಸಾಮರ್ಥ್ಯ, ಹಾಗೂ ಕೀಲು ನೋವಿಗೆ ಸಹಕಾರಿಯಾಗುತ್ತದೆ ಎನ್ನಲಾಗುತ್ತದೆ. ಬೆಳ್ಳುಳ್ಳಿ ಕ್ಯಾನ್ಸರ್ನಿಂದ ಕೂಡಾ ರಕ್ಷಿಸುವ ಶಕ್ತಿಯನ್ನು ಹೊಂದಿದೆ ಎಂಬ ಅಭಿಪ್ರಾಯವೂ ಇದೆ.ತುಪ್ಪ ಮತ್ತು ಬೆಳ್ಳುಳ್ಳಿ ಎರಡೂ ಅಡುಗೆ ಮನೆಯ ಪ್ರಮುಖ ಪದಾರ್ಥಗಳು. ಕೆಲವರು ಬೆಳ್ಳುಳ್ಳಿಯನ್ನು ಹಾಗೆಯೇ ತಿನ್ನಲು ಇಷ್ಟಪಡುತ್ತಾರೆ. ಇನ್ನು ಕೆಲವರು ಹುರಿದು ತಿನ್ನುತ್ತಾರೆ. ಆದರೆ ತುಪ್ಪದಲ್ಲಿ ಹುರಿದ ಬೆಳ್ಳುಳ್ಳಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬ ವಿಚಾರ ನಿಮಗೆ ಗೊತ್ತಾ? ನಮ್ಮ ಪಾರಂಪರಿಕ ಆಹಾರ ಪದ್ಧತಿಯಲ್ಲೂ ತುಪ್ಪದಲ್ಲಿ ಹುರಿದ ಬೆಳ್ಳುಳ್ಳಿಯನ್ನು ಅನ್ನದ ಜೊತೆ ತಿನ್ನುವ ಪದ್ಧತಿ ಇದೆ. ಇದಲ್ಲದೆ, ತುಪ್ಪ ಮತ್ತು ಬೆಳ್ಳುಳ್ಳಿ ಸೇರಿದಾಗ ತುಪ್ಪದಲ್ಲಿರುವ ಕೊಬ್ಬಿನ ಪ್ರಮಾಣ ಕಡಿಮೆಯಾಗುತ್ತದೆ

ಹುರಿದ ಬೆಳ್ಳುಳ್ಳಿಯ ಆರೋಗ್ಯ ಲಾಭಗಳು
*ಹುರಿದ ಬೆಳ್ಳುಳ್ಳಿ ದೇಹದ ನೈಸರ್ಗಿಕ ನಿರ್ವಿಶೀಕರಣ ಪ್ರಕ್ರಿಯೆಗಳನ್ನು ಹೆಚ್ಚಿಸುತ್ತದೆ. ಹುರಿದ ಬೆಳ್ಳುಳ್ಳಿ ವಿಟಮಿನ್ ಸಿ, ಮ್ಯಾಂಗನೀಸ್ ಮತ್ತು ವಿಟಮಿನ್ ಬಿ 6ಯಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.
*ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವಿಸಿದರೆ, ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಲು ಇದು ಪರಿಣಾಮಕಾರಿಯಾಗಿದೆ. ನೀವು ರಾತ್ರಿ ಮಲಗುವ ಮೊದಲು ಹುರಿದ ಬೆಳ್ಳುಳ್ಳಿಯನ್ನು ಸೇವಿಸಿ ನಂತರ ಕೆಲವು ಗಂಟೆಗಳ ಕಾಲ ಏನನ್ನೂ ಸೇವಿಸಬೇಡಿ.
*ಹುರಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯುತ್ತದೆ. ಹುರಿದ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡಬಹುದು.
*ಬೆಳ್ಳುಳ್ಳಿಯನ್ನು ತುಪ್ಪದಲ್ಲಿ ಹುರಿದು ತಿಂದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮುಖ್ಯವಾಗಿ ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಗುಣಗಳು ಶೀತ ಮತ್ತು ಕೆಮ್ಮು ಗುಣಪಡಿಸುತ್ತವೆ ಮತ್ತು ವೈರಸ್ ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತವೆ.

*ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳು ಉಂಟಾಗುವುದಿಲ್ಲ. ಏಕೆಂದರೆ ಬೆಳ್ಳುಳ್ಳಿ ಅಪಧಮನಿಗಳನ್ನು ಸ್ವಚ್ಛವಾಗಿರಿಸುತ್ತದೆ.
*ಅಧಿಕ ರಕ್ತದೊತ್ತಡದಿಂದ ಹೋರಾಡುವ ಪುರುಷರು ನಿಯಮಿತವಾಗಿ ಹುರಿದ ಬೆಳ್ಳುಳ್ಳಿಯನ್ನು ತಿನ್ನಬೇಕು, ಏಕೆಂದರೆ ಹುರಿದ ಬೆಳ್ಳುಳ್ಳಿಯನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
*ಹುರಿದ ಬೆಳ್ಳುಳ್ಳಿಯ ನಿಯಮಿತ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿ ವೈರಸ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ.
*ಹುರಿದ ಬೆಳ್ಳುಳ್ಳಿ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಪುರುಷರಲ್ಲಿ ಲೈಂಗಿಕ ಆರೋಗ್ಯವನ್ನು ಸುಧಾರಿಸುತ್ತದೆ.
*ಬೆಳುಳ್ಳಿ 1-2 ಎಸಳು ಬೆಳ್ಳುಳ್ಳಿಯನ್ನು ರುಬ್ಬಿಕೊಳ್ಳಿ ಮತ್ತು ಅದರಲ್ಲಿ 1 ಚಮಚ ಜೇನುತುಪ್ಪವನ್ನು ಬೆರೆಸಿ ತಿನ್ನಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಹೀಗೆ ಸೇವಿಸುವುದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು.
*ಹುರಿದ ಬೆಳ್ಳುಳ್ಳಿ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ. ಇದರೊಂದಿಗೆ, ವಯಸ್ಸಾದ ಗುಣಲಕ್ಷಣಗಳಾದ ಸುಕ್ಕುಗಳು, ದುರ್ಬಲ ಮೂಳೆಗಳು, ಸೂಕ್ಷ್ಮ ರೇಖೆಗಳು ಮುಂತಾದ ದೇಹದಲ್ಲಿನ ವಯಸ್ಸಾದ ಚಿಹ್ನೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ
*ಬೆಳ್ಳುಳ್ಳಿಯಲ್ಲಿರುವ ಪೂರಕಗಳು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟಗಳಿಂದ ಉಂಟಾಗುವ ಅಪಧಮನಿಗಳ ಅಡಚಣೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ
ಡಿಜಿಟಲ್ ಯುಗದಲ್ಲಿ ಮಕ್ಕಳ ದೃಷ್ಟಿ ರಕ್ಷಣೆಗೆ ಉಪಯುಕ್ತ ಯೋಗ ವ್ಯಾಯಾಮಗಳು
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


