Tuesday, September 1, 2026
spot_img
More
    spot_img
    HomeLatest newsಮಣಿಪುರದಲ್ಲಿ ಇನ್ನೂ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆ: ರಾಜ್ಯಸಭೆ ಅನುಮೋದನೆ

    ಮಣಿಪುರದಲ್ಲಿ ಇನ್ನೂ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆ: ರಾಜ್ಯಸಭೆ ಅನುಮೋದನೆ

    ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ.

    Advertisement

    ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

    2023ರ ಹೈಕೋರ್ಟ್ ಆದೇಶದ ವಿರುದ್ಧವಾಗಿ ಬುಡಕಟ್ಟು ಸಮುದಾಯದ ಮೆರವಣಿಗೆಯೊಂದನ್ನು ಆಯೋಜಿಸಲಾಗಿತ್ತು ಈ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಏರ್ಪಟ್ಟಿತು. ಇಲ್ಲಿಂದ ಸತತವಾಗಿ ಜನಾಂಗೀಯ ಹಿಂಸಾಚಾರ ಶುರುವಾಗಿದೆ.

    ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ, ಈ ವರ್ಷ ಫೆಬ್ರವರಿ 13 ರಂದು 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ರಾಜ್ಯದಲ್ಲಿ 1951ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

    ಧರ್ಮಸ್ಥಳ ಸರಣಿ ಕೊಲೆ: ಜುಲೈ 16ರ ಬಳಿಕ ಎಲ್ಲಿಯೂ ಕಾಣಿಸಿಲ್ಲ ದೂರುದಾರ; ಈಗ ಎಲ್ಲಿದ್ದಾನೆ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading