ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆ ಹಾಗೂ ಮಹದಾಯಿ ಯೋಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಸರ್ಕಾರವೇ ಇದಕ್ಕೆ ಅನುಮತಿ ನೀಡಲಿ ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ ಒಂದು ರೀತಿಯಲ್ಲಿ ಅನುಮತಿ ನೀಡಿತ್ತು. ಆ ಮೇಲೆ ಸಂಘರ್ಷ ಪ್ರಾರಂಭ ಆಗಿದೆ. ಇದಕ್ಕೆ ನಿರ್ಬಂಧ ಹೇರಬಾರದು. ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಮೇಕೆದಾಟು ಯೋಜನೆ ಬೆಂಗಳೂರಿಗೆ ಕುಡಿಯುವ ನೀರು ಯೋಜನೆ. ಮೇಕೆದಾಟು ಯೋಜನೆಗೂ ಕೇಂದ್ರ ಅನುಮತಿ ಕೊಡಬೇಕು ಎಂದು ಆಗ್ರಹಿಸಿದರು.
ಇನ್ನು ನೀರಾವರಿ ಯೋಜನೆ ಕುರಿತು ಸರ್ವ ಪಕ್ಷ ಸಭೆ ಕರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಇಲಾಖೆ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ವಿಪಕ್ಷದವರು ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟು ಸಕಾರಾತ್ಮಕ ಟೀಕೆ ಮಾಡಲಿ ಅದನ್ನು ಎಲ್ಲರೂ ಪರಿಗಣಿಸೋಣ. ಆಡಳಿತ ಪಕ್ಷದ ವಿರುದ್ಧ ಟೀಕೆ ಮಾಡುವುದು ಸಹಜ. ನಾವು ವಿಪಕ್ಷದಲ್ಲಿದ್ದಾಗಲೂ ಟೀಕೆ ಮಾಡಿದ್ದೇವೆ ಎಂದು ಹೇಳಿದರು.
ರಾಮೇಶ್ವರಂ ಕೆಫೆ ಜಿರಳೆ ಪ್ರಕರಣಕ್ಕೆ ಟ್ವಿಸ್ಟ್: ಹಣಕ್ಕಾಗಿ ನಡೆದಿದ್ದ ನಾಟಕ ಬಯಲು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


