ಹೊಸದಿಲ್ಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪವನ್ನು ಮಾಡಿದ್ದು, ಮಹಾರಾಷ್ಟ್ರದಂತೆ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದಿದ್ದಾರೆ.
ಚುನಾವಣಾ ಆಯೋಗ ಬಿಜೆಪಿ ಪಕ್ಷಕ್ಕೆ ಮೋಸ ಮಾಡಲು ಅನುವು ಮಾಡಿಕೊಡುತ್ತಿದ್ದು, ಒಂದು ಕ್ಷೇತ್ರದಲ್ಲಿ ಹೇಗೆ ಸಾವಿರಾರು ಹೊಸ ಮತದಾರರು ಸೇರ್ಪಡೆಗೊಳ್ಳಲು ಸಾಧ್ಯ? ಅದೂ ಸಹ 40, 45, 50 ಹಾಗೂ 55 ವರ್ಷಗಳ ಹೊಸ ಮತದಾರರು ಸೇರ್ಪಡೆಗೊಳ್ಳಲು ಹೇಗೆ ಸಾಧ್ಯ ಎಂದಿದ್ದಾರೆ. ಅಲ್ಲದೇ ತಮ್ಮ ಬಳಿ ಸಾಕ್ಷಿ ಇದ್ದು, ಎಲ್ಲವನ್ನೂ ತೆರೆದಿಡಲಿದ್ದೇವೆ ಎಂದು ಹೇಳಿದ್ದಾರೆ.
ಹೀಗೆ ರಾಹುಲ್ ಗಾಂಧಿ ಕರ್ನಾಟಕದ ಒಂದು ಕ್ಷೇತ್ರದಲ್ಲಿ ವೋಟ್ ಗೋಲ್‌ಮಾಲ್ ನಡೆದಿದೆ ಎಂದ ಕೂಡಲೇ ಕಾಂಗ್ರೆಸ್ ನಾಯಕರು ಬೆಂಗಳೂರು ಗ್ರಾಮಾಂತರ ಕ್ಷೇತ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಮತಗಳ್ಳ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಡಿಕೆ ಬ್ರದರ್ಸ್ ಭದ್ರಕೋಟೆಯಾಗಿದ್ದ ಇಲ್ಲಿ ಡಿಕೆ ಸುರೇಶ್ ಹೊಸ ಅಭ್ಯರ್ಥಿ ಸಿಎನ್ ಮಂಜುನಾಥ್ ವಿರುದ್ಧ 2,69,647 ಮತಗಳ ಅಂತರದಿಂದ ಸೋತಿದ್ದು ಈ ಹಿಂದಿನಿಂದಲೂ ದೊಡ್ಡ ಪ್ರಶ್ನೆಯಾಗಿ ಉಳಿದುಕೊಂಡಿದ್ದು, ಸದ್ಯ ರಾಹುಲ್ ಗಾಂಧಿ ಅವರ ಹೇಳಿಕೆ ಈ ಅನುಮಾನವನ್ನು ಹೆಚ್ಚಿಸಿದೆ ಎಂದಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತ: ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಫೋಟೊ ಪ್ರಸಾರ ಮಾಡದಂತೆ ಅರ್ಜಿ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


