ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ ಸಂಬಂಧ ಪ್ರಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ತಿಂಗಳು ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು.
ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ ಶೇಕಡಾ.80ರಷ್ಟು ಖಾಲಿ ಇವೆ. ದೊಡ್ಡ ಸಂಖ್ಯೆಯಲ್ಲಿ ಹುದ್ದೆ ಖಾಲಿ ಇರುವುದು ಸರಿಯಲ್ಲ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಎಲ್ಲಾ ರಾಜ್ಯಗಳು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿರ್ದೇಶನ ನೀಡಿದೆ.
ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸಿಜೆಐ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠ ಸೂಚನೆ ನೀಡಿದೆ.
ಜೂನ್.26ರಂದು ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ತಾಯಿ ಹಾಗೂ ನಾಲ್ಕು ಮರಿ ಹುಲಿಗಳು ವಿಷಪ್ರಾಶನ ಮಾಡಿದ್ದ ಹಸುವಿನ ಮೃತದೇಹ ತಿಂದು ಸಾವನ್ನಪ್ಪಿದ್ದವು. ಪ್ರಕರಣ ಸಂಬಂಧ ಮೂವರು ಆರೋಪಿಗಳು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ರಾಮೇಶ್ವರಂ ಕೆಫೆ ಜಿರಳೆ ಪ್ರಕರಣಕ್ಕೆ ಟ್ವಿಸ್ಟ್: ಹಣಕ್ಕಾಗಿ ನಡೆದಿದ್ದ ನಾಟಕ ಬಯಲು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


