ಬೆಂಗಳೂರು: ನಿನ್ನೆ ( ಜುಲೈ 24 ) ರಾಮೇಶ್ವರಂ ಕೆಫೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಳಿಗೆಯಲ್ಲಿ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದರು. ಇದೀಗ ಆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹಣಕ್ಕಾಗಿ ನಡೆದ ಮಸಲತ್ತು ಎಂದು ರಾಮೇಶ್ವರಂ ಕೆಫೆ ಮಾಲೀಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸುಳ್ಳು ಆರೋಪ ಮಾಡಿ, ಹಣ ಸುಲಿಗೆ ಮಾಡಲು ಯತ್ನಿಸಿದ ವ್ಯಕ್ತಿಗಳ ವಿರುದ್ಧ ಶಾಖೆಯ ಆಯುಕ್ತರಿಗೆ ಮುಖ್ಯಸ್ಥ ಸುಮಂತ್, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಜು.24ರ ಬೆಳಗ್ಗೆ 5-7 ವ್ಯಕ್ತಿಗಳ ಗುಂಪು ಸಾರ್ವಜನಿಕ ಗೊಂದಲವನ್ನು ಸೃಷ್ಟಿಸಿದ್ದರು.
ಬಡಿಸಿದ ಆಹಾರದಲ್ಲಿ ಹುಳು ಇದೆ ಎಂದು ಸುಳ್ಳು ಆರೋಪ ಹೊರಿಸಿ, ನಂತರ ಪರಿಹಾರ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸ್ವಲ್ಪ ಸಮಯದ ನಂತರ, ಅನಾಮಧೇಯ ನಂಬರ್ನಿಂದ ಬಂದ ಕರೆಯಿಂದ 25 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ದಾಖಲೆಗಳನ್ನು ಪೊಲೀಸರಿಗೆ ಸಲ್ಲಿಸಿ, ಬ್ಲ್ಯಾಕ್ ಮೇಲ್ ಪ್ರಯತ್ನದ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದೆ.
ತುಪ್ಪದಲ್ಲಿ ಹುರಿದ ಬೆಳ್ಳುಳ್ಳಿ: ದೇಹಕ್ಕೆ ಸಿಗುವ ಆರೋಗ್ಯ ಲಾಭಗಳು
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


