ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಕುರಿತು ಸಾಕ್ಷಿ ದೂರುದಾರ ಚಿನ್ನಯ್ಯ ಬಂಧನದ ಬಳಿಕ ಎಲ್ಲವೂ ಮುಗಿಯಿತು ಎಂದುಕೊಂಡಿದ್ದ ಹಲವರಿಗೆ ಎಸ್‌ಐಟಿ ಅಧಿಕಾರಿಗಳ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ. ಎಸ್‌ಐಟಿ ಅಧಿಕಾರಿಗಳು ಈ ಅಪಪ್ರಚಾರ ಮತ್ತು ಶವ ಹೂತಿಟ್ಟ ಆರೋಪದ ಸತ್ಯಾಸತ್ಯತೆ ತಿಳಿಯಲು ಪ್ರಯತ್ನ ಮುಂದುವರೆಸಿದೆ ಎನ್ನಲಾಗಿದೆ.
ಈಗ ಕೇವಲ ಶೇ 25 ರಷ್ಟು ಮುಗಿದಿದೆ ಅಷ್ಟೇ. ಇನ್ನೂ ಸಾಕಷ್ಟು ತನಿಖೆ ಬಾಕಿ ಇದೆ. ಅವಸರ ಮಾಡಬೇಡಿ. ನಮ್ಮೊಂದಿಗೆ ಸಹಕರಿಸಿ ” ಎಂಬ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಸ್‌ಐಟಿ ವಿಚಾರಣೆ ಇನ್ನಷ್ಟು ದಿನ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.
ತನಿಖೆಗೆ ಗಡುವು ನಿಗದಿಪಡಿಸಲು ಸಾಧ್ಯವಿಲ್ಲ. ‘ಇಷ್ಟು ಸಮಯದಲ್ಲಿ’ ತನಿಖೆಯನ್ನು ಮುಗಿಸಲು ನಾವು ಅವರಿಗೆ ಆದೇಶಿಸಲು ಆಗದು. ಸಾಧ್ಯವಾದಷ್ಟು ಬೇಗ ತನಿಖೆಯನ್ನು ಮುಗಿಸಲು ಮಾತ್ರ ನಾನು ಎಸ್‌ಐಟಿಗೆ ಸೂಚಿಸಿದ್ದೇನೆ. ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


