Tuesday, September 1, 2026
spot_img
More
    spot_img
    HomeTop Story30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ: ಅಮಿತಾ ಶಾ ಹೇಳಿದ್ದೇನು

    30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ: ಅಮಿತಾ ಶಾ ಹೇಳಿದ್ದೇನು

    Advertisement

    ಕ್ರಿಮಿನಲ್ ಆರೋಪದ ಮೇಲೆ ಬಂಧನಕ್ಕೊಳಗಾದ 30 ದಿನಗಳೊಳಗೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ತಮ್ಮ ಹುದ್ದೆಯನ್ನು ಕಳೆದುಕೊಳ್ಳುವಂತಹ ಐತಿಹಾಸಿಕ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.

    ಸಂವಿಧಾನ (130ನೇ ತಿದ್ದುಪಡಿ) ಮಸೂದೆ, 2025 ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ಸಂಸತ್ತು ಈ ಕ್ರಮವನ್ನು ಬೆಂಬಲಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಶಾ , ಇದು ಅಂಗೀಕಾರವಾಗುತ್ತದೆ ಎಂದು ನನಗೆ ಖಚಿತವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ವಿರೋಧ ಪಕ್ಷದಲ್ಲಿ ನೈತಿಕತೆಯನ್ನು ಬೆಂಬಲಿಸುವ ಮತ್ತು ನೈತಿಕ ನೆಲೆಯನ್ನು ಕಾಯ್ದುಕೊಳ್ಳುವ ಅನೇಕ ಜನರು ಇರುತ್ತಾರೆ ಎಂದರು ಅಮಿತಾಶಾ.

    ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆ ವಿಧಿಸಬಹುದಾದ ಆರೋಪಗಳ ಮೇಲೆ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಬಂಧಿಸಿ ಸತತ 30 ದಿನಗಳ ಕಾಲ ಬಂಧನದಲ್ಲಿಟ್ಟರೆ ಅವರನ್ನು ಸ್ವಯಂಚಾಲಿತವಾಗಿ ಅಧಿಕಾರದಿಂದ ತೆಗೆದುಹಾಕುವ ಪ್ರಸ್ತಾಪವನ್ನು ಮಸೂದೆ ಹೊಂದಿದೆ. ಈ ಮಸೂದೆಯಲ್ಲಿ ಪ್ರಧಾನಿ ಹುದ್ದೆಯನ್ನು ಅಡಕ ಮಾಡಿದವರೇ ಪ್ರಧಾನಿ ಮೋದಿ ಎಂದು ಅಮಿತ್ ಶಾ ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading