Thursday, September 3, 2026
spot_img
More
    spot_img
    HomeLatest newsಹಬ್ಬಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ; ಹೈಕೋರ್ಟ್‌ ಅಸಮಾಧಾನ

    ಹಬ್ಬಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ; ಹೈಕೋರ್ಟ್‌ ಅಸಮಾಧಾನ

    ಬೆಂಗಳೂರು: ಇತ್ತಿಚೀನ ದಿನಗಳಲ್ಲಿ ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಅನುಸರಿಸುತ್ತಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಸಮಾಧಾನ ಹೊರಹಾಕಿದೆ.

    Advertisement

    ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಬುಧವಾರ ಮಧ್ಯಂತರ ಆದೇಶ ಮಾಡಿದೆ.

    ದಾವಣಗೆರೆ ಎಕ್ಸ್‌ಟೆನ್ನನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ರೇಣುಕಾಚಾರ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ ಅರುಣ್ ಅಸಮಾಧಾನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಸರ್ಕಾರ ಅಥವಾ ಡಿಸಿ ಆದೇಶವನ್ನು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶವಿತ್ತು. ಅದು ಬಿಟ್ಟು ಜನರನ್ನು ಸೇರಿಸಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ನೆರೆದಿದ್ದ ಜನರನ್ನು ಉದ್ದೇಶಿಸಿ ನೀವು ಡಿಜೆ ಹಾಕಿ, ತಾಕತ್ತಿದ್ದರೆ ಪೊಲೀಸರು ಬಂದು ತಡೆಯಲಿ ನೋಡೋಣ ಎಂದು ಹೇಳಿಕೆ ನೀಡಿದ್ದಾರೆ. ಇದು ಜನಪ್ರತಿನಿಧಿಯೊಬ್ಬರು ಬಳಸುವ ಭಾಷೆಯೇ ಎಂದು ಹೆಚ್ಚುವರಿ ಸರ್ಕಾರಿ ಅಭಿಯೋಜಕ ಜಗದೀಶ್ ಆಕ್ಷೇಪಿಸಿದರು.

    ಈ ವೇಳೆ ಪೀಠವು ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಸರ್ಕಾರವೂ ಸಹ. ಇದನ್ನು ಗಮನಿಸಲಾಗಿದೆ ಎಂದಿತು.

    ವೋಟರ್ ಐಡಿ ದುರುಪಯೋಗ ತಡೆಯಲು ಆಧಾರ್ OTP ಇ-ಸೈನ್ ವ್ಯವಸ್ಥೆ ಜಾರಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading