Tuesday, November 3, 2026
spot_img
More
    spot_img
    HomeSportsCricketಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯದಲ್ಲಿ ಆ ಆಟಗಾರನಿಗೆ ಸ್ಥಾನ: ಕೆಟ್ಟ ಮೇಲೆ ಬುದ್ದಿ...

    ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯದಲ್ಲಿ ಆ ಆಟಗಾರನಿಗೆ ಸ್ಥಾನ: ಕೆಟ್ಟ ಮೇಲೆ ಬುದ್ದಿ ಕಲಿತ ಟೀಮ್‌ ಇಂಡಿಯಾ

    ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯ ಆರಂಭವಾಗಿದ್ದು, ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಆಸ್ಟ್ರೇಲಿಯಾ ಈ ಬಾರಿ ಬ್ಯಾಟಿಂಗ್‌ ಆರಿಸಿಕೊಂಡಿದೆ.

    ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಸೋತು ಸರಣಿ ಕೈಚೆಲ್ಲಿರುವ ಭಾರತ ಇಂದಿನ ಪಂದ್ಯವನ್ನು ಗೆದ್ದು ಕ್ಲೀನ್‌ಸ್ವೀಪ್‌ ಮುಖಭಂಗದಿಂದ ಪಾರಾಗಬೇಕಿದೆ.

    ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಅರ್ಷ್‌ದೀಪ್‌ ಸಿಂಗ್‌ ಹಾಗೂ ನಿತಿಶ್‌ ಕುಮಾರ್‌ ರೆಡ್ಡಿ ಬದಲಾಗಿ ಪ್ರಸಿದ್ಧ್‌ ಕೃಷ್ಣ ಹಾಗೂ ಕುಲ್‌ದೀಪ್‌ ಯಾದವ್ ತಂಡ ಸೇರಿಕೊಂಡಿದ್ದಾರೆ.

    ಇನ್ನು ಮೊದಲ ಎರಡು ಪಂದ್ಯಗಳಲ್ಲಿಯೂ ಆಡುವ ಅವಕಾಶ ಸಿಗದ ಕುಲ್‌ದೀಪ್‌ ಯಾದವ್‌ರನ್ನು ಈ ಪಂದ್ಯದಲ್ಲಿ ಕಣಕ್ಕಿಳಿಸಿದ್ದು, ವಿಕೆಟ್‌ ತೆಗೆಯಬಲ್ಲ ಸಾಮರ್ಥ್ಯವಿರುವ ಕುಲ್‌ದೀಪ್‌ರನ್ನು ಎರಡು ಪಂದ್ಯ ಸೋತ ನಂತರ ತಂಡಕ್ಕೆ ಕರೆತರಲಾಗಿದೆ.

    ಅತ್ತ ಆಸ್ಟ್ರೇಲಿಯಾದಿಂದ ಕ್ಷೇವಿಯರ್‌ ಬಾರ್ಟ್ಲೆಟ್‌ ಬದಲಾಗಿ ನಾಥನ್‌ ಎಲ್ಲಿಸ್‌ ತಂಡಕ್ಕೆ ವಾಪಸ್ಸಾಗಿದ್ದಾರೆ.

    ಆಸ್ಟ್ರೇಲಿಯಾ ಆಡುವ ಬಳಗ: ಮಿಚೆಲ್ ಮಾರ್ಷ್(ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಕೂಪರ್ ಕಾನೊಲಿ, ಮಿಚೆಲ್ ಓವನ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್

    ಭಾರತ ಆಡುವ ಬಳಗ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

    ವಾಯುಭಾರ ಕುಸಿತ; ಮುಂದಿನ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search