Tuesday, November 3, 2026
spot_img
More
    spot_img
    HomeSportsCricketಕೊಹ್ಲಿ ಸತತ 2 ಡಕ್‌ಔಟ್‌ ಆಗಿರಬಹುದು ಆದರೆ 3ನೇ ಪಂದ್ಯದಲ್ಲಿ ಹೆಚ್ಚು ರನ್‌ ಬಾರಿಸುವ ಆಟಗಾರನಾಗಲಿದ್ದಾರೆ...

    ಕೊಹ್ಲಿ ಸತತ 2 ಡಕ್‌ಔಟ್‌ ಆಗಿರಬಹುದು ಆದರೆ 3ನೇ ಪಂದ್ಯದಲ್ಲಿ ಹೆಚ್ಚು ರನ್‌ ಬಾರಿಸುವ ಆಟಗಾರನಾಗಲಿದ್ದಾರೆ ಎಂದ ಆಸ್ಟ್ರೇಲಿಯಾ ಕ್ರಿಕೆಟಿಗ

    ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್‌ ಇಂಡಿಯಾ ವೈಟ್‌ ಬಾಲ್‌ ಸರಣಿಗಳಲ್ಲಿ ಕಾಂಗರೂಗಳ ವಿರುದ್ಧ ಸೆಣಸಾಡಲಿದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿಯನ್ನಾಡುತ್ತಿರುವ ಭಾರತ ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದು, ಇದೀಗ ಮೂರನೇ ಪಂದ್ಯವನ್ನು ಗೆದ್ದು ಕ್ಲೀನ್‌ ಸ್ವೀಪ್‌ನಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದೆ.

    ಮೂರನೇ ಪಂದ್ಯ ಇಂದು ( ಅಕ್ಟೋಬರ್‌ 25 ) ಸಿಡ್ನಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಇನ್ನು ಮೊದಲ ಎರಡು ಪಂದ್ಯಗಳಲ್ಲಿ ಭಾರತ ಸೋತಿದ್ದರೆ ತಂಡದ ಪ್ರಮುಖ ಆಟಗಾರ ವಿರಾಟ್‌ ಕೊಹ್ಲಿ ಎರಡೂ ಪಂದ್ಯಗಳಲ್ಲಿ ಡಕ್‌ಔಟ್‌ ಆಗಿ ಹಿನ್ನಡೆ ಅನುಭವಿಸಿದ್ದಾರೆ.

    ಹೀಗೆ ಎರಡು ಪಂದ್ಯಗಳಲ್ಲೂ ಶೂನ್ಯ ಸುತ್ತಿರುವ ವಿರಾಟ್‌ ಕೊಹ್ಲಿ ಇಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಹೆಚ್ಚು ರನ್‌ ಬಾರಿಸಲಿರುವ ಆಟಗಾರನಾಗಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕೆಲ್ ಕ್ಲಾರ್ಕ್‌ ಭವಿಷ್ಯ ನುಡಿದಿದ್ದಾರೆ.

    ಕೊನೆಯ ಪಂದ್ಯದಲ್ಲಿ ಹೆಚ್ಚು ವಿಕೆಟ್‌ ಯಾರು ಪಡೆಯಬಹುದು ಹಾಗೂ ಹೆಚ್ಚು ರನ್‌ ಯಾರು ಬಾರಿಸಬಹುದು ಎಂದು ಊಹಿಸಿರುವ ಮೈಕೆಲ್‌ ಕ್ಲಾರ್ಕ್‌ ಈ ರೀತಿ ಹೇಳಿದ್ದು, ಆಸ್ಟ್ರೇಲಿಯಾದ ಜೋಶ್‌ ಹೇಜಲ್‌ವುಡ್‌ ಪಂದ್ಯದಲ್ಲಿ ಅತಿಹೆಚ್ಚು ವಿಕೆಟ್‌ ಪಡೆಯಲಿದ್ದಾರೆ ಎಂದೂ ಸಹ ಹೇಳಿದ್ದಾರೆ.

    ಅವನ ಬ್ಯಾಟಿಂಗ್‌ ನಿಧಾನ ಏಷ್ಯಾಕಪ್‌ಗೆ ಬೇಡ ಎಂದಿದ್ದ ಸೂರ್ಯ; ಕ್ಯಾರೆ ಎನ್ನದೇ ಆ ಆಟಗಾರನಿಗೆ ಅವಕಾಶ ಕೊಟ್ಟಿದ್ದ ಬಿಸಿಸಿಐ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search