ಸಿಡ್ನಿ: ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿ ಸರಣಿಯಲ್ಲಿ ವೈಟ್‌ವಾಷ್ ಮುಖಭಂಗವನ್ನು ತಪ್ಪಿಸಿಕೊಂಡಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಭಾರತ 38.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು.
ಪರ ಆರಂಭಿಕನಾಗಿ ಕಣಕ್ಕಿಳಿದ ಶುಬ್‌ಮನ್ ಗಿಲ್ 24 ರನ್ ಗಳಿಸಿ ಔಟ್ ಆದರೆ ನಂತರ ಎರಡನೇ ವಿಕೆಟ್‌ಗೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 213 ರನ್‌ಗಳ ಜತೆಯಾಟವನ್ನಾಡಿ ಪಂದ್ಯವನ್ನು ಗೆಲ್ಲಿಸಿದರು. ರೋಹಿತ್ ಶರ್ಮಾ 125 ಎಸೆತಗಳಲ್ಲಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 121 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 81 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 74 ರನ್ ಕಲೆಹಾಕಿದರು.
ಹೀಗೆ ಅಬ್ಬರದ ಆಟವನ್ನಾಡಿ ಕಮ್‌ಬ್ಯಾಕ್ ಮಾಡಿದ ರೋಕೊ ಜೋಡಿ ಪಂದ್ಯ ಮುಗಿದ ಬಳಿಕ ತಮಗಾಗಿ ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳ ಕುರಿತು ಮಾತನಾಡಿ ಕೃತಜ್ಞತೆ ಸಲ್ಲಿಸಿ ಪೆವಿಲಿಯನ್‌ನತ್ತ ಸಾಗಿದರು.
ಈ ವೇಳೆ ಕೊಹ್ಲಿ ಹಾಗೂ ರೋಹಿತ್ ನೋಡಲು ಕಾತರರಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬರು ಭಾರತದ ರಾಷ್ಟ್ರ ಧ್ವಜವನ್ನು ನೆಲಕ್ಕೆ ಬೀಳಿಸಿದ್ದರು. ಅದನ್ನು ಗಮನಿಸಿದ ಕೊಹ್ಲಿ ಅದನ್ನು ಎತ್ತಿ ಅಭಿಮಾನಿ ಕೈಗೆ ನೀಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕೊಹ್ಲಿ ನಡೆಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


