Tuesday, November 3, 2026
spot_img
More
    spot_img
    HomeSportsCricketಮಹಿಳಾ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯ ಪ್ರಕಟ: ಭಾರತದ ಎದುರಾಳಿ ಕಂಡು ಖತಂ, ಟಾಟಾ, ಗುಡ್‌ಬೈ ಎಂದ...

    ಮಹಿಳಾ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯ ಪ್ರಕಟ: ಭಾರತದ ಎದುರಾಳಿ ಕಂಡು ಖತಂ, ಟಾಟಾ, ಗುಡ್‌ಬೈ ಎಂದ ನೆಟ್ಟಿಗರು!

    ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಐಸಿಸಿ ವನಿತೆಯರ ಏಕದಿನ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತ ಮುಕ್ತಾಯದ ಹಂತಕ್ಕೆ ಬಂದಿದ್ದು, ಇಂದು ( ಅಕ್ಟೋಬರ್‌ 25 ) ನಡೆದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯ ಮುಗಿದ ಬಳಿಕ ಸೆಮಿಫೈನಲ್‌ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.

    ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದ್ದು, ಅಗ್ರಸ್ಥಾನದಲ್ಲಿಯೇ ಮುಂದುವರಿದಿದೆ. ಈ ಮೂಲಕ ಲೀಗ್‌ ಹಂತ ಮುಕ್ತಾಯದ ಸಮಯಕ್ಕೆ ಆಸ್ಟ್ರೇಲಿಯಾ ಮೊದಲ ಸ್ಥಾನ, ದಕ್ಷಿಣ ಆಫ್ರಿಕಾ ಎರಡನೇ ಸ್ಥಾನ, ಇಂಗ್ಲೆಂಡ್‌ ಮೂರನೇ ಸ್ಥಾನ ಹಾಗೂ ಭಾರತ ನಾಲ್ಕನೇ ಸ್ಥಾನ ಪಡೆದುಕೊಂಡಿವೆ.

    ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದ್ದು, ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಭಾರತಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ಎದುರಾಳಿಯಾಗಲಿದೆ.

    ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯ ಅಕ್ಟೋಬರ್‌ 29ರಂದು ಗುವಾಹಟಿಯಲ್ಲಿ ನಡೆಯಲಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ಅಕ್ಟೋಬರ್‌ 30ರಂದು ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಹೀಗೆ ಭಾರತದ ಸೆಮಿಫೈನಲ್‌ ಎದುರಾಳಿ ಆಸ್ಟ್ರೇಲಿಯಾ ಎಂಬುದು ಘೋಷಣೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರತಕ್ಕೆ ಸೋಲು ಖಚಿತ ಎಂಬ ಟ್ವೀಟ್‌ಗಳು ದೊಡ್ಡ ಮಟ್ಟದಲ್ಲಿ ಹರಿದುಬರಲಾರಂಭಿಸಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಯಾವ ಪಂದ್ಯದಲ್ಲಿಯೂ ಸೋಲನ್ನೇ ಕಾಣದ ಆಸ್ಟ್ರೇಲಿಯನ್ನರು ಭಾರತವನ್ನು ಲೀಗ್‌ ಹಂತದಲ್ಲಿಯೂ ಹೀನಾಯವಾಗಿ ಸೋಲಿಸಿದ್ದರು. ಹಾಗೆಯೇ ಸೆಮಿಫೈನಲ್‌ನಲ್ಲೂ ಸಹ ಭಾರತಕ್ಕೆ ಸೋಲಾಗಲಿದೆ ಎಂದು ಬಹುತೇಕ ಕ್ರಿಕೆಟ್‌ ಪ್ರೇಮಿಗಳು ಭವಿಷ್ಯ ನುಡಿದಿದ್ದಾರೆ.

    ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದ ಕೃಷ್ಣಬೈರೇಗೌಡ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search