ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಒಕ್ಕೂಟದಲ್ಲಿ ಸಿಎಂ ಸ್ಥಾನ ಅವಧಿ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಈಗ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.
ದೇವೇಂದ್ರ ಫಡ್ನವೀಸ್ ಅವರು ಮೊದಲು ಎರಡೂವರೆ ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಸೇವೆ ಸಲ್ಲಿಸಲಿದ್ದಾರೆ.
ಬಳಿಕ ನಂತರದ ಇನ್ನುಳಿದ ಎರಡೂವರೆ ವರ್ಷ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದಲ್ಲದೇ ಮಹಾರಾಷ್ಟ್ರದಲ್ಲಿ ಇಬ್ಬರು ಡಿಸಿಎಂಗಳನ್ನು ಸೇರಿಸಲು ವಿಶೇಷ ಸೂತ್ರವನ್ನು ಸಹ ರೂಪಿಸಲಾಗಿದೆ ಎನ್ನಲಾಗಿದೆ.
ಇನ್ನು ಶಾಸಕರ ಬಲದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿಯ ಕೇಂದ್ರ ನಾಯಕತ್ವದ ನಡುವಿನ ಚರ್ಚೆಯ ನಂತರ ಈ ವ್ಯವಸ್ಥೆಗೆ ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಅವರನ್ನು ಅಧಿಕೃತವಾಗಿ ಘೋಷಿಸಿದ ನಂತರ ಈ ವಾರದಲ್ಲೇ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


