Friday, August 7, 2026
spot_img
More
    spot_img
    HomeStateಶ್ರೇಯಸ್‌ ಪಟೇಲ್‌ರನ್ನು ಹೊಗಳಿ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರೀತಂಗೌಡ

    ಶ್ರೇಯಸ್‌ ಪಟೇಲ್‌ರನ್ನು ಹೊಗಳಿ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರೀತಂಗೌಡ

    ಹಾಸನ: ಶ್ರೇಯಸ್‌ ಪಟೇಲ್‌ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.

    Advertisement

    ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.

    ಶ್ರೇಯಸ್‌ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್‌ ಪಟೇಲ್‌ಗೂ ಸಲ್ಲುತ್ತದೆ. ಈ ಮೂಲಕ 2024ರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದರು.

    ಇಲ್ಲಿಯವರೆಗೂ ಕಾರ್ಯಕ್ರಮ ನಡೆಯುವಾಗ ಒಂದು ತೋಟ ಅಥವಾ ಒಂದು ಮನೆಯಲ್ಲಿ ಲೈಟ್‌ ಇರುತ್ತಿತ್ತು.

    ಆದರೆ ಈಗ ಇಡೀ ಹೊಳೆನರಸೀಪುರದಲ್ಲಿ ಲೈಟ್‌ ಇದೆ. ಇದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಈಗ ಹೊಳೆನರಸೀಪುರ ಶ್ರೇಯಸ್‌ ಪಟೇಲ್‌ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಒಂದು ಪಕ್ಷದ ಹುದ್ದೆಯಲ್ಲಿದ್ದೇನೆ. ಶ್ರೇಯಸ್‌ ಪಟೇಲ್‌ ಬೇರೆ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯ. ಎಲ್ಲರೂ ಸೇರಿ ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ ಎಂದು ಸಲಹೆ ನೀಡಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading